ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ 1400 ಟನ್ ಆಮ್ಲಜನಕ ಒದಗಿಸಲು ಸಿದ್ಧವಿದ್ದು, ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಅಗತ್ಯಗಳನ್ನು ಪೂರೈಸುವ ದೃಷ್ಟಿಯಿಂದ ದೆಹಲಿಯಲ್ಲಿ ಹಿರಿಯ ಅಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.
ಕೊರೋನಾ ಪರಿಸ್ಥಿತಿ ನಿಭಾಯಿಸಲು ಅಗತ್ಯವಾದ ಸೌಲಭ್ಯಗಳ ಬಗ್ಗೆ ಒಂದು ವಾರ ಮೊದಲೇ ಈ ಅಧಿಕಾರಿಯ ಗಮನಕ್ಕೆ ತಂದಲ್ಲಿ ಕೇಂದ್ರ ಸರ್ಕಾರದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಚಿವರು ಒಂದಾಗಿ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸಲಿರುವುದಾಗಿ ತಿಳಿಸಿದ್ದಾರೆ. ಮೇ ತಿಂಗಳಿನಲ್ಲಿ ಕೊರೋನಾ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದ್ದು, ಇದಕ್ಕಾಗಿ ಹೆಚ್ಚುವರಿ ಸೌಲಭ್ಯ ನೀಡುವಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ಅವರು ನೀಡಿದರು.
ಈ ತಿಂಗಳ 30 ರ ವರೆಗಿನ ಬಳಕೆಗಾಗಿ ರಾಜ್ಯಕ್ಕೆ 1 ಲಕ್ಷ ರೆಮ್ಡೆಸಿವಿರ್ ವಯಲ್ಸ್ ಬೇಕು ಎಂಬುದಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಪ್ರಸ್ತುತ 1.22 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದೆ. ಆಮ್ಲಜನಕ ಬಳಕೆ ಪ್ರಮಾಣದ ಮೇಲೆ ರೆಮ್ಡೆಸಿವಿರ್ ಪ್ರಮಾಣವನ್ನು ನಿಗದಿ ಮಾಡವುದು ಸರಿಯಲ್ಲ. ಕೊರೋನಾ ಸೋಂಕಿತರ ಸಂಖ್ಯೆಯನ್ನಾಧರಿಸಿ ಈ ಹಂಚಿಕೆ ಮಅಡಲಾಗಿದೆ. ಜೊತೆಗೆ ರಾಜ್ಯಕ್ಕೆ 800 ಮೆಟ್ರಿಕ್ ಟನ್ ಆಮ್ಲಜನಕ ಹಂಚಿಕೆಯನ್ನೂ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.