News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೇಂದ್ರ 50% ಲಸಿಕೆಗಳನ್ನು ರಾಜ್ಯಗಳಿಗೆ ಉಚಿತವಾಗಿ ನೀಡುವುದನ್ನು ಮುಂದುವರಿಸಲಿದೆ

ನವದೆಹಲಿ: ಕೇಂದ್ರವು  50% ಲಸಿಕೆಗಳನ್ನು ರಾಜ್ಯಗಳಿಗೆ ಉಚಿತವಾಗಿ ನೀಡುವುದನ್ನು ಮುಂದುವರಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸ್ಪಷ್ಟಪಡಿಸಿದ್ದಾರೆ.

“ಹೊಸ ನೀತಿಯ ಪ್ರಕಾರ, ಮೇ 1 ರಿಂದ ಮೂರನೇ ಹಂತದ ವ್ಯಾಕ್ಸಿನೇಷನ್ ಪ್ರಾರಂಭಿಸಿದ ನಂತರವೂ, ಭಾರತ ಸರ್ಕಾರವು ತನ್ನ 50 ಪ್ರತಿಶತ ಕೋಟಾದಿಂದ ಲಸಿಕೆ ಡೋಸ್‌ ಅನ್ನು ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಲಿದೆ. ಈ ಲಸಿಕೆಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಕಾರ್ಯಕ್ರಮ ನಿರ್ವಹಿಸಲು ಸಹಕಾರಿಯಾಗಲಿದೆ” ಎಂದು ಹರ್ಷವರ್ಧನ್‌ ತಿಳಿಸಿದ್ದಾರೆ.

“ಆರೋಗ್ಯವು ರಾಜ್ಯಗಳ ವಿಷಯವಾಗಿದೆ,  ಕೇಂದ್ರವು ಮೂಲಭೂತವಾಗಿ ರಾಜ್ಯಗಳನ್ನು ಸಮನ್ವಯಗೊಳಿಸುತ್ತದೆ ಮತ್ತು ಅವುಗಳ ಕಾರ್ಯವನ್ನು ಸುಗಮಗೊಳಿಸುತ್ತದೆ. ಲಸಿಕೆ ವಿತರಣಾ ನೀತಿಯನ್ನು ಉದಾರೀಕರಣಗೊಳಿಸಲು ಮತ್ತು ರಾಜ್ಯಗಳಿಗೆ ನಿಯಂತ್ರಣವನ್ನು ನೀಡಲು  ಬಹುತೇಕ ಎಲ್ಲ ರಾಜ್ಯಗಳು ವಿನಂತಿಗಳನ್ನು ಮಾಡಿವೆ, ಅದರ ನಂತರವೇ ನಾವು ಮುನ್ನಡೆಯಲು ನಿರ್ಧರಿಸಿದ್ದೇವೆ” ಎಂದಿದ್ದಾರೆ.

ಕಾರ್ಪೊರೇಟ್ ಮತ್ತು ಖಾಸಗಿ ವಲಯದವರು ತಮ್ಮ ಸಂಪನ್ಮೂಲಗಳನ್ನು ಬಳಸಿ ಲಸಿಕೆಯನ್ನು ತಮ್ಮ ಉದ್ಯೋಗಿಗಳಿಗೆ ನೀಡಬೇಕೆಂದು ನಾವು ಬಯಸುತ್ತೇವೆ, ಇದರಿಂದಾಗಿ ಪ್ರತಿ ವಯಸ್ಕರಿಗೆ ಲಸಿಕೆ ನೀಡಲು ಸಾಧ್ಯವಾಗಲಿದೆ ಎಂದಿದೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top