ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ಅಗತ್ಯ ನೆರವು ನೀಡಲು ಸಿದ್ಧವಿರುವುದಾಗಿ ಅಮೆರಿಕ ಸರ್ಕಾರ ತಿಳಿಸಿದೆ. ಈ ಸಂಬಂಧ ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿ ಕನ್ನಡದಲ್ಲಿಯೂ ಸಂದೇಶಗಳನ್ನು ಪ್ರಕಟಿಸಿದೆ.
ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಅಗತ್ಯ ನೆರವುಗಳನ್ನು ನೀಡುವ ಪ್ರಯತ್ನವನ್ನು ನಡೆಸಲಾಗುತ್ತಿದೆ ಎಂದು ತಮ್ಮ ಸಂದೇಶದಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
ಅಮೆರಿಕದ ಭದ್ರತಾ ಸಲಹೆಗಾರ ಜೇಕ್ ಸಲ್ಲಿವಾನ್, ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ತೀವ್ರವಾಗಿದೆ. ಈ ಬಗ್ಗೆ ಅಮೆರಿಕವೂ ಕಾಳಜಿ ಹೊಂದಿದೆ. ಸಾಂಕ್ರಾಮಿಕದ ವಿರುದ್ಧ ಹೋರಾಟದಲ್ಲಿ ಭಾರತದ ನಮ್ಮ ಗೆಳೆಯರು ಮತ್ತು ಸಹಭಾಗಿಗಳಿಗೆ ಹೆಚ್ಚಿನ ಸಾಮಗ್ರಿಗಳು ಮತ್ತು ಅಗತ್ಯ ಬೆಂಬಲ ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
https://t.co/2LAuZkGgUq pic.twitter.com/VzMsgvWyAn
— U.S. Consulate General Chennai (@USAndChennai) April 25, 2021
ಈ ಟ್ವೀಟ್ ಅನ್ನು ಅಮೆರಿಕ ಕಾನ್ಸುಲೇಟ್ ಕಚೇರಿ ಕನ್ನಡ, ತಮಿಳು ಮತ್ತು ಮಲಯಾಳಂ ಗಳಲ್ಲಿಯೂ ಪ್ರಕಟಿಸಿದೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್, ಕೊರೋನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಭಾರತ ಸರ್ಕಾರದ ಜೊತೆಗೆ ಕೈ ಜೋಡಿಸಿ ನಿಕಟ ಬೆಂಬಲ ನೀಡುತ್ತಿದ್ದೇವೆ. ಭಾರತದ ನಾಗರಿಕರಿಗೆ ಮತ್ತು ಆರೋಗ್ಯ ಕ್ಷೇತ್ರದ ಹೋರಾಟಗಾರರಿಗೆ ಹೆಚ್ಚುವರಿ ಬೆಂಬಲವನ್ನು ಕ್ಷಿಪ್ರವಾಗಿ ನಿಯೋಜಿಸುತ್ತೇವೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
— U.S. Consulate General Chennai (@USAndChennai) April 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.