ನವದೆಹಲಿ: ಎರಡನೇ ಕೊರೋನಾವೈರಸ್ ಅಲೆ ಎದುರಿಸುತ್ತಿರುವ ಭಾರತಕ್ಕೆ ಸಹಾಯ ಮಾಡಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮುಂದಾಗಿದ್ದಾರೆ, ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಭಾರತಕ್ಕೆ ಹೆಚ್ಚಿನ ಸರಬರಾಜು ಮತ್ತು ಸಂಪನ್ಮೂಲಗಳನ್ನು ಕಳುಹಿಸುವುದಾಗಿ ಘೋಷಿಸಿದ ಕೆಲವೇ ಗಂಟೆಗಳ ನಂತರ, ಜೋ ಬೈಡೆನ್ ಹೇಳಿಕೆ ಬಿಡುಗಡೆ ಮಾಡಿ, “ಸಾಂಕ್ರಾಮಿಕ ರೋಗದ ಆರಂಭದಲ್ಲಿ ನಮ್ಮ ಆಸ್ಪತ್ರೆಗಳು ತೊಂದರೆಗೊಳಗಾಗಿದ್ದ ಸಂದರ್ಭದಲ್ಲಿ ಭಾರತವು ಅಮೆರಿಕಾಗೆ ಸಹಾಯವನ್ನು ಕಳುಹಿಸಿತ್ತು, ಅದರಂತೆಯೇ ನಾವು ಅಗತ್ಯವಿರುವ ಸಮಯದಲ್ಲಿ ಭಾರತಕ್ಕೆ ಸಹಾಯ ಮಾಡಲು ದೃಢ ನಿಶ್ಚಯವನ್ನು ಹೊಂದಿದ್ದೇವೆ” ಎಂದಿದ್ದಾರೆ.
ಏಪ್ರಿಲ್ 25 ರಂದು ಭಾರತವು 3.49 ಲಕ್ಷಕ್ಕೂ ಹೆಚ್ಚು ಹೊಸ ಕೋವಿಡ್-19 ಪ್ರಕರಣಗಳೊಂದಿಗೆ ವಿಶ್ವದ ಅತಿ ಹೆಚ್ಚು ಏಕದಿನ ಹೆಚ್ಚಳವನ್ನು ದಾಖಲಿಸಿದೆ. ಭಾನುವಾರ ಬೆಳಿಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶವು 24 ಗಂಟೆಗಳಲ್ಲಿ 2,767 ಸಾವುಗಳನ್ನು ಕಂಡಿದೆ. ಭಾರತದಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳು ಈಗ 1,69,60,172 ಕ್ಕೆ ಏರಿವೆ, 26,82,751 ಪ್ರಕರಣಗಳು ಸಕ್ರಿಯವಾಗಿವೆ.
ಅಪಾಯಕಾರಿಯಾದ ಕೋವಿಡ್-19 ವಿರುದ್ಧ ಬೆಂಬಲ ಮತ್ತು ಸರಬರಾಜುಗಳನ್ನು ತ್ವರಿತವಾಗಿ ನಿಯೋಜಿಸಲು ಭಾರತ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ.
Just as India sent assistance to the United States as our hospitals were strained early in the pandemic, we are determined to help India in its time of need. https://t.co/SzWRj0eP3y
— President Biden (@POTUS) April 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.