ನವದೆಹಲಿ: ಭಾರತದಲ್ಲಿ ಕೋವಿಡ್-19 ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಪ್ರಪಂಚದಾದ್ಯಂತದಿಂದ ಬೆಂಬಲವು ಹರಿದು ಬರುತ್ತಿದೆ. ವಿದೇಶಗಳಲ್ಲಿ ಹೆಸರು ಮಾಡಿರುವ ಭಾರತೀಯ ಮೂಲಕ ಗಣ್ಯರು ಭಾರತಕ್ಕಾಗಿ ಮಿಡಿಯುತ್ತಿದ್ದಾರೆ. ಇವರಲ್ಲಿ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಡೆಲ್ಲಾ ಮತ್ತು ಗೂಗಲ್ ಸಿಇಒ ಸುಂದರ್ ಪಿಚ್ಚೈ ಅಗ್ರ ಸ್ಥಾನದಲ್ಲಿದ್ದಾರೆ.
ಕೋವಿಡ್ ಪರಿಹಾರ ಕಾರ್ಯಗಳಿಗೆ ನೆರವಾಗಲು ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ ಸಾಧನಗಳ ಖರೀದಿಗೆ ಬೆಂಬಲ ನೀಡಲು ಮೈಕ್ರೋಸಾಫ್ಟ್ ಕಂಪನಿಯು ತನ್ನ ಸಂಪನ್ಮೂಲಗಳು ಮತ್ತು ತಂತ್ರಜ್ಞಾನವನ್ನು ಬಳಸುವುದನ್ನು ಮುಂದುವರಿಸಲಿದೆ ಎಂದು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಹೇಳಿದ್ದಾರೆ.
ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಗೂಗಲ್ ಮತ್ತು ಅದರ ತಂಡಗಳು ಯುನಿಸೆಫ್ ಮತ್ತು ಗಿವ್ಇಂಡಿಯಾಗಳಿಗೆ ವೈದ್ಯಕೀಯ ಸರಬರಾಜು ಮಾಡಲು, ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಸಂಸ್ಥೆಗಳಿಗೆ ಸಹಾಯ ಮಾಡಲು ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯವನ್ನು ನೀಡುವ ಸಲುವಾಗಿ 135 ಕೋಟಿ ರೂ.ನೀಡಲಿದೆ ಎಂದು ಘೋಷಿಸಿದ್ದಾರೆ.
ಭಾರತವು ಕಳೆದ 24 ಗಂಟೆಗಳಲ್ಲಿ 3.5 ಲಕ್ಷಕ್ಕೂ ಹೆಚ್ಚು ಹೊಸ ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ ಮತ್ತು ಕೋವಿಡ್-19 ಕಾರಣದಿಂದಾಗಿ 2,800 ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.
Devastated to see the worsening Covid crisis in India. Google & Googlers are providing Rs 135 Crore in funding to @GiveIndia, @UNICEF for medical supplies, orgs supporting high-risk communities, and grants to help spread critical information.https://t.co/OHJ79iEzZH
— Sundar Pichai (@sundarpichai) April 26, 2021
I am heartbroken by the current situation in India. I’m grateful the U.S. government is mobilizing to help. Microsoft will continue to use its voice, resources, and technology to aid relief efforts, and support the purchase of critical oxygen concentration devices.
— Satya Nadella (@satyanadella) April 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.