ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ್ದು, ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸೇರಿದಂತೆ ಇನ್ನಿತರ ಸಚಿವರು, ಕೋವಿಡ್ ಸಲಹಾ ಸಮಿತಿಯ ತಜ್ಞರು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ.
ಕೊರೋನಾ ಹೆಚ್ಚಾಗಿರುವ ಬೆಂಗಳೂರು ನಗರವನ್ನು ಕೆಲ ದಿನಗಳ ಕಾಲ ಲಾಕ್ಡೌನ್ ಮಾಡುವ ಸಂಬಂದವೂ ತಜ್ಞರು ಮುಖ್ಯಮಂತ್ರಿಗಳಿಗೆ ಇದೇ ಸಂದರ್ಭದಲ್ಲಿ ಸಲಹೆ ನೀಡಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ನಿಯಂತ್ರಣ ತಪ್ಪುತ್ತಿರುವ ಕೊರೋನಾ ಸೋಂಕಿನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಲವು ಸಲಹೆ ಸೂಚನೆಗಳನ್ನು ಸಹ ನೀಡಲಾಗಿದೆ. ಜನತಾ ಕರ್ಫ್ಯೂ ಜಾರಿಗೊಳಿಸುವಂತೆಯೂ ತಜ್ಞರು ಶಿಪಾರಸ್ಸು ಮಾಡಿದ್ದಾರೆ.
ಮುಂದಿನ ನಾಲ್ಕೈದು ವಾರಗಳ ಕಾಲ ಇಡೀ ವಾರ ವೀಕೆಂಡ್ ಕರ್ಫ್ಯೂ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಮೇ 4 ರ ವರೆಗೆ ಕಾಯದೇ ಶೀಘ್ರದಲ್ಲೇ ಕಠಿಣ ನಿಯಮವನ್ನು, ಲಾಕ್ಡೌನ್ ಮಾದರಿಯ ಕ್ರಮವನ್ನು ಜಾರಿಗೆ ತರುವಂತೆ ಸೂಚಿಸಿದ್ದಾರೆ.ಸೂಕ್ತ ಕ್ರಮವನ್ನು ಈಗಲೇ ಜಾರಿಗೊಳಿಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈ ಮೀರುವ ಸಾಧ್ಯತೆಗಳನ್ನೂ ತಳ್ಳಿ ಹಾಕುವಂತಿಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಬೆಡ್ಗಳ ಸಂಖ್ಯೆ ಹೆಚ್ಚಿಸುವುದು, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಮೊದಲಾದವುಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ತಜ್ಞರು ಸೂಚಿಸಿದ್ದಾರೆ. ಜೊತೆಗೆ ಮೇ ಅಂತ್ಯದ ವರೆಗೂ ಸಭೆ ಸಮಾರಂಭಗಳನ್ನು ನಿಷೇಧಿಸುವಂತೆಯೂ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.