ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಂಕಿನಿಂದ ಮೃತಪಡುತ್ತಿರುವ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶವಗಳ ಅಂತ್ಯ ಸಂಸ್ಕಾರಕ್ಕಾಗಿ 7 ಚಿತಾಗಾರಗಳನ್ನು ಕೊರೋನಾ ಸೋಂಕಿತರ ಅಂತ್ಯಸಂಸ್ಕಾರಕ್ಕಾಗಿ ಮೀಸಲಿಡಲಾಗಿದೆ.
ಈ ಸಂಬಂಧ ಬಿಬಿಎಂಪಿ ಮಾಹಿತಿ ನೀಡಿದ್ದು, ನಗರದಲ್ಲಿರುವ 12 ಚಿತಾಗಾರಗಳ ಪೈಕಿ 7 ನ್ನು ಕೊರೋನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದ ಹಿನ್ನೆಲೆಯಲ್ಲಿ ಮೀಸಲಿಡಲಾಗಿದೆ. ಮೆಡಿ, ಅಗ್ರಹಾರ, ಕುಡ್ಲು, ಪಣಥೂರ್, ಸುಮ್ಮನಹಳ್ಳಿ, ಪೀಣ್ಯಾ, ಬನಶಂಕರಿ ಚಿತಾಗಾರಗಳನ್ನು ಕೊರೋನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನಡೆಸುವ ಸಲುವಾಗಿ ಮೀಸಲಿಡಲಾಗಿದೆ ಎಂದು ತಿಳಿಸಿದೆ.
ಈಗಾಗಲೇ ಕೊರೋನಾಗೆ ಮೀಸಲಿಡಲಾದ ಚಿತಾಗಾರಗಳಲ್ಲಿ ಕೋವಿಡೇತರ ಶವಗಳ ಅಂತ್ಯಸಂಸ್ಕಾರದ ಬುಕ್ಕಿಂಗ್ ಕಾರ್ಯಗಳನ್ನು ನಿಷ್ಕ್ರಿಯಗೊಳಿಸುವಂತೆಯೂ ಸೂಚಿಸಲಾಗಿದೆ. ಇದು ಅನಗತ್ಯ ಗೊಂದಲ ನಿರ್ಮಾಣವಾಗುವುದನ್ನು ತಪ್ಪಿಸಲು ಸಹಕಾರಿಯಾಗಲಿದೆ ಎಂದು ಬಿಬಿಎಂಪಿ ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೆಯೇ ಸೋಂಕಿನಿಂದ ಮೃತಪಟ್ಟವರ ಮೃತದೇಹಗಳನ್ನು ಆರ್ಎಫ್ಐಡಿ ಹಿಯರ್ಸ್ ವ್ಯಾನ್ಗಳಲ್ಲಿ ನವೀಕರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮಾರ್ಷಲ್ಗಳ ನಿಯೋಜನೆ ಮಾಡಲಾಗುವುದಾಗಿಯೂ ಬಿಬಿಎಂಪಿ ಹೇಳಿದೆ.
ಕೊರೋನಾ ಸೂಕ್ತ ನಡಾವಳಿಗಳನ್ನು ಅನುಸರಿಸಿಕೊಂಡು ಶವ ಸಂಸ್ಕಾರ ಮಾಡುವಂತೆಯೂ ಸಿಬ್ಬಂದಿಗಳಿಗೆ ಸೂಚಿಸಿರುವುದಾಗಿ ಬಿಬಿಎಂಪಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.