ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ವಿಪರೀತವಾಗಿ ಏರಿಕೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮೇ 1 ರಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರರ ಸೂಚಿಸಿದೆ. ಮೂರನೇ ಹಂತದ ಲಸಿಕೆ ನೀಡಿಕೆ ಕಾರ್ಯಕ್ರಮ ಇದಾಗಿದ್ದು, ರಾಜ್ಯ ಸರ್ಕಾರ 18 – 44 ವರ್ಷದೊಳಗಿನ ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ನೀಡುವುದಾಗಿ ತಿಳಿಸಿದೆ.
ಈಗಾಗಲೇ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಕೊರೋನಾ ಲಸಿಕೆಗಳನ್ನು ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿಯೇ ಕೊರೋನಾ ಲಸಿಕೆಗಳನ್ನು ನೀಡಲು ಮುಂದಾಗಿದೆ.
ಈ ಸಂಬಂಧ ಸಚಿವ ಡಾ ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಮೇ 1 ರಿಂದ 18 – 44 ವರ್ಷದೊಳಗಿನ ನಾಗರೀಕರಿಗೆ ಎಲ್ಲಾ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಎಲ್ಲ ಅರ್ಹ ವ್ಯಕ್ತಿಗಳು ಏಪ್ರಿಲ್ 28 ರಿಂದ ಲಸಿಕೆ ಪಡೆಯಲು ತಪ್ಪದೆ ನೋಂದಣಿ ಮಾಡಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJP ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಮೇ 1ರಿಂದ 18-44 ವರ್ಷದೊಳಗಿನ ನಾಗರೀಕರಿಗೆ ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ.
ಎಲ್ಲ ಅರ್ಹ ವ್ಯಕ್ತಿಗಳು ಏಪ್ರಿಲ್ 28ರಿಂದ ಲಸಿಕೆ ಪಡೆಯಲು ತಪ್ಪದೆ ನೋಂದಣಿ ಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ.
— Dr Sudhakar K (@DrSudhakar_) April 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.