ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳದಲ್ಲಿ ಕಡಿತ ಮಾಡಿದೆ ಎಂಬ ಸುದ್ದಿ ಸತ್ಯವಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ಅವರು ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನೌಕರರ ವೇತನ ಕಡಿತ ಸೇರಿದಂತೆ ಇನ್ನಿತರ ಗಂಭೀರ ವಿಚಾರಗಳ ಬಗ್ಗೆ ಯಾವುದೇ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೊದಲು ರಾಜ್ಯ ಸರ್ಕಾರ ಸರ್ಕಾರಿ ನೌಕರರ ಸಂಘದ ಪದಅಧಿಕಾರಿಗಳ ಜೊತೆಗೆ ಚರ್ಚೆ ನಡೆಸುತ್ತಾರೆ. ಆ ಬಳಿಕವೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರ ಮತ್ತು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆಗೆ ವೇತನ ಕಡಿತಕ್ಕೆ ಸಂಬಂಧಿಸಿದಂತಹ ಯಾವುದೇ ಮಾತುಕತೆ ನಡೆದಿಲ್ಲ. ಈ ವದಂತಿ ಸತ್ಯಕ್ಕೆ ದೂರವಾದದ್ದು. ಈ ಸಂಬಂಧ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.