ಬೆಂಗಳೂರು: ನಗರದಲ್ಲಿ ವೈದ್ಯಕೀಯ ಮೂಲಸೌಕರರ್ಯಗಳ ಲಭ್ಯತೆ ಉತ್ತಮವಾಗಿದ್ದರೂ, ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಆತಂಕದ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಬಿಬಿಎಂಪಿಗೆ ನೆರವಿನ ಅಗತ್ಯತೆ ಇದೆ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಪರಿಸ್ಥಿತಿ ಹತೋಟಿಗೆ ಸಿಗುತ್ತಿಲ್ಲ. ಈ ಪರಿಸ್ಥಿತಿಯನ್ನು ನಿಭಾಯಿಸುವ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಸಹಕಾರದ ಅಗತ್ಯತೆ ಹೆಚ್ಚಾಗಿದೆ. ಈಗಾಗಲೇ ಎನ್ಜಿಒಗಳು, ತಜ್ಞರು, ಸ್ವಯಂಸೇವಕರು, ಸಾರ್ವಜನಿಕರು ಹಾಗೂ ಸರ್ಕಾರದ ಸಹಾಯವನ್ನು ಕೇಳಲಾಗುತ್ತಿದೆ ಎಂದು ಗುಪ್ತಾ ತಿಳಿಸಿದ್ದಾರೆ.
ಈ ಸಂಕಷ್ಟದ ಅವಧಿಯನ್ನು ನಿಭಾಯಿಸುವ ಹಿನ್ನೆಲೆಯಲ್ಲಿ ವೈದ್ಯರು, ಶುಶ್ರೂಷಕರು, ಕೊರೋನಾ ಕೇರ್ ಸೆಂಟರ್ಗಳ ನಿರ್ವಹಣೆ, ಕೌನ್ಸಲಿಂಗ್, ಹೋಂ ಐಸೋಲೇಷನ್, ಸಂಪರ್ಕಿತರನ್ನು ಪತ್ತೆ ಹಚ್ಚುವುದು, ಸ್ಯಾಂಪಲ್ ಸಂಗ್ರಹಣೆ ಮೊದಲಾದವುಗಳಿಗೆ ಸ್ವಯಂಸೇವಕರ ಅಗತ್ಯತೆ ಇದೆ. ಈಗಾಗಲೇ ಕೆಲವರ ಜೊತೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುವ ಸಂಬಂಧ ಮಾತುಕತೆಗಳನ್ನು ನಡೆಸಲಾಗುತ್ತಿದೆ. ಕೆಲವು ಎನ್ಜಿಒಗಳು ಸಹ ಕೊರೋನಾ ಸಮಯದಲ್ಲಿ ಕೈಜೋಡಿಸಲು ಮುಂದೆ ಬಂದಿವೆ ಎಂದು ಹೇಳಿದ್ದಾರೆ.
ಕೊರೋನಾ ಸೋಂಕು ನಿಯಂತ್ರಣ ತಪ್ಪುತ್ತಿರುವ ಹಿನ್ನೆಲೆಯಲ್ಲಿ ಆರೈಕೆ ಕೇಂದ್ರಗಳುಉ, ಆಸ್ಪತ್ರೆ ಸೇವೆಗಳ ಹೆಚ್ಚಳಕ್ಕೆ ಸಹ ಬಿಬಿಎಂಪಿ ಅಗತ್ಯ ಸಿದ್ಧತೆಗಳನ್ನು ನಡೆಸುತ್ತಿದೆ. ರಾಜ್ಯ ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳು 50್ ಗಳಷ್ಟು ಹಾಸಿಗೆಗಳನ್ನು ನೀಡಬೇಕಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಖಾಸಗಿ ಆಸ್ಪತ್ರೆಗಳಿಂದ ಕೊರೋನಾ ಸೋಂಕಿತರ ಚಿಕಿತ್ಸೆಗೆ 11 ಸಾವಿರ ಹಾಸಿಗೆಗಳನ್ನು ಪಡೆಯಲಾಗುತ್ತದೆ. ಈವರೆಗೂ ಸುಮಾರು 9 ಸಾವಿರ ಹಾಸಿಗೆಗಳು ಲಭ್ಯವಾಗಿದ್ದು, ಉಳಿದ ಹಾಸಿಗೆಗಳನ್ನು ಶೀಘ್ರದಲ್ಲೇ ಪಡೆಯಲಾಗುತ್ತದೆ ಎಂದು ಗುಪ್ತಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.