ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯಾದ್ಯಂತ 14 ದಿನಗಳ ಕಾಲ ಕಠಿಣ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಕ್ರಮವನ್ನು ಯಶಸ್ವಿಗೊಳಿಸುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ. ಈ ನಿಬಂಧನೆಗಳನ್ನು ಪಾಲನೆ ಮಾಡಿದಲ್ಲಿ ಕೊರೋನಾ ಸೋಂಕಿನಿಂದ ಪಾರಾಗುವುದು ಸಾಧ್ಯ ಎಂದು ಅವರು ಹೇಳಿದ್ದಾರೆ.
ಕರ್ಫ್ಯೂ ಅವಧಿಯಲ್ಲಿ ಅನಗತ್ಯ ಓಡಾಟ ನಡೆಸಿದಲ್ಲಿ ಮೊದಲು ತಿಳಿ ಹೇಳುತ್ತೇವೆ. ಮತ್ತೆಯೂ ಅದೇ ತಪ್ಪು ಮುಂದುವರಿಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. 14 ದಿನಗಳ ಕಾಲ ಸ್ವಯಂ ನಿಯಂತ್ರಣ ಹೇರುವ ಮೂಲಕ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ. ಸ್ವಯಂ ನಿಯಂತ್ರಣದಲ್ಲೇ ನಮ್ಮ ಆರೋಗ್ಯ ಮತ್ತು ಇತರರ ಆರೋಗ್ಯ ಅಡಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.