ಮಂಗಳೂರು: ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಕುಲ್ಲಂಗಾಲು ನಿವಾಸಿ ಕೆ. ಮಾಧವ ಭಟ್ , ತಮ್ಮ ಸ್ವಂತ ಹಣದಲ್ಲಿ ಕೆರೆಯನ್ನು ನಿರ್ಮಿಸಿ, ಪ್ರಶಂಸೆಗೆ ಒಳಗಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅಂತರ್ಜಲ ಮಟ್ಟ ಹೆಚ್ಚಳದ ಬಗೆಗೆ ಪ್ರಸ್ತಾಪಿಸಿದ್ದು, ಇದರಿಂದ ಪ್ರೇರಣೆಗೊಂಡ ಮಾಧವ ಭಟ್, 50 ಲಕ್ಷ ರೂಪಾಯಿ ವೆಚ್ಚದಲ್ಲಿ ವ್ಯವಸ್ಥಿತವಾಗಿ ಕೆರೆ ನಿರ್ಮಿಸಿದ್ದಾರೆ. ಈ ಕೆರೆ 1 ಕೋಟಿ 75 ಲಕ್ಷ ಲೀಟರ್ ನೀರಿನ ಸಾಮರ್ಥ್ಯ ಹೊಂದಿದೆ.
ಸುಮಾರು ಎರಡೂವರೆ ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಕೆರೆಯ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಮಳೆಗಾಲದಲ್ಲಿ ಕೆರೆಯಲ್ಲಿ ನೀರು ಶೇಖರಣೆಗೊಂಡು ಸುತ್ತಮುತ್ತಲಿನ ರೈತರು, ಜಾನುವಾರುಗಳಿಗೆ ಹಾಗೂ ಪ್ರಾಣಿ-ಪಕ್ಷಿಗಳಿಗೆ ಸಹಕಾರಿಯಾಗಲಿದೆ.
ಡಿಡಿ ನ್ಯೂಸ್ನೊಂದಿಗೆ ಮಾಧವ ಭಟ್, ಕೆರೆ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಮಳೆಗಾಲದಲ್ಲಿ ಕೆರೆಯಲ್ಲಿ ನೀರು ಶೇಖರಣೆಯಾಗುವುದರಿಂದ ಸುತ್ತಮುತ್ತಲಿನ ಬಾವಿಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆಯಾಗಲಿದೆ. ಅಲ್ಲದೆ ಬೇಸಿಗೆ ಕಾಲದಲ್ಲಿ ಪ್ರಾಣಿ, ಪಕ್ಷಿಗಳಿಗೆ ನೀರಿನ ಮೂಲವೂ ದೊರೆತಂತಾಗುತ್ತದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.