ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾರತೀಯ ಜನತಾ ಯುವ ಮೋರ್ಚಾದ ಟೆಲಿ ಕನ್ಸಲ್ಟೇಶನ್ ಸಹಾಯವಾಣಿ (#BJYMDoctorHelpline) ಗೆ ಚಾಲನೆಯನ್ನು ನೀಡಿದ್ದಾರೆ.
ಕೋವಿಡ್-19 ತುರ್ತು ಸೇವೆಗಳು ಹಾಗೂ ಸೋಂಕಿತರು & ವೈದ್ಯರೊಂದಿಗಿನ ಸಮಾಲೋಚನೆಗೆ ಸಹಾಯವಾಗುವ ನಿಟ್ಟಿನಲ್ಲಿ ದೇಶಾದ್ಯಂತ #BJYMDoctorHelpline ಅನ್ನು ಆರಂಭಿಸಲಾಗಿದೆ.
080 6817 3286 ಸಹಾಯವಾಣಿಯ ಸಂಖ್ಯೆಯಾಗಿದೆ
ಕೊರೋನ ಸೋಂಕಿನ ಗುಣ ಲಕ್ಷಣಗಳಿದ್ದಲ್ಲಿ ಅಥವಾ ಗುಣ ಲಕ್ಷಣಗಳು ಇಲ್ಲದ್ದಿದಲ್ಲಿ, ಕೋವಿಡ್ ರಿಪೋರ್ಟ್ ಪಾಸಿಟಿವ್ ಆಗಿದ್ದಲ್ಲಿ ಸರಿಯಾದ ಮಾಹಿತಿ, ನಾವು ಅನುಸರಿಸಬೇಕಾದ ಕ್ರಮಗಳನ್ನು ಈ ಕನ್ಸಲ್ಟೇಶನ್ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ನಡ್ಡಾ ಹೇಳಿದ್ದಾರೆ.
ಇದರಡಿ 500ಕ್ಕೂ ಅಧಿಕ ವೈದ್ಯರು ದೇಶಾದ್ಯಂತ ಟೆಲಿ ಸಮಾಲೋಚನೆ ಮೂಲಕ ರೋಗಿಗಳ ಸಹಾಯಕ್ಕೆ ಸಹಕರಿಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹಾಗೂ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವೀ ಸೂರ್ಯ ಸಹಾಯವಾಣಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
BJP National President Shri @JPNadda launches #BJYMDoctorHelpline via video conferencing. https://t.co/vkxjLUfXRc
— BJP (@BJP4India) April 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.