ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕೇರ್ಸ್ ಫಂಡ್ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲು ಅನುಮೋದನೆ ನೀಡಿದ್ದಾರೆ
ಕೋವಿಡ್ ನಿರ್ವಹಣೆಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್ಎಂಒ) ಪೂರೈಕೆಯನ್ನು ಸುಧಾರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಆಕ್ಸಿಜನ್ ಸಾಂದ್ರಕಗಳನ್ನು ಶೀಘ್ರವಾಗಿ ಖರೀದಿ ಮಾಡಬೇಕು ಮತ್ತು ಹೆಚ್ಚಿನ ಒತ್ತಡ ಹೊಂದಿರುವ ರಾಜ್ಯಗಳಿಗೆ ಒದಗಿಸಬೇಕು ಎಂದು ಮೋದಿ ಸೂಚನೆ ನೀಡಿದ್ದಾರೆ
ಪಿಎಂ ಕೇರ್ಸ್ ಫಂಡ್ ಅಡಿಯಲ್ಲಿ ಈ ಹಿಂದೆ ಮಂಜೂರಾದ 713 ಪಿಎಸ್ಎ ಸ್ಥಾವರಗಳ ಜೊತೆಗೆ, 500 ಹೊಸ ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ (ಪಿಎಸ್ಎ) ಆಮ್ಲಜನಕ ಸ್ಥಾವರಗಳನ್ನು ಪಿಎಂ ಕೇರ್ಸ್ ಫಂಡ್ ಅಡಿಯಲ್ಲಿ ಮಂಜೂರು ಮಾಡಲಾಗಿದೆ.
ಪಿಎಸ್ಎ ಸ್ಥಾವರಗಳು ಜಿಲ್ಲಾ ಕೇಂದ್ರ ಮತ್ತು ಶ್ರೇಣಿ 2 ನಗರಗಳಲ್ಲಿನ ಆಸ್ಪತ್ರೆಗಳಲ್ಲಿ ದ್ರವ ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲಿವೆ. ಡಿಆರ್ಡಿಒ ಮತ್ತು ಸಿಎಸ್ಐಆರ್ ಅಭಿವೃದ್ಧಿಪಡಿಸಿದ ಸ್ಥಳೀಯ ತಂತ್ರಜ್ಞಾನವನ್ನು ದೇಶೀಯ ಉತ್ಪಾದಕರಿಗೆ ವರ್ಗಾಯಿಸುವುದರೊಂದಿಗೆ ಈ 500 ಪಿಎಸ್ಎ ಸ್ಥಾವರಗಳನ್ನು ಸ್ಥಾಪಿಸಲಾಗುತ್ತಿದೆ.
ಪಿಎಸ್ಎ ಸ್ಥಾವರಗಳನ್ನು ಸ್ಥಾಪಿಸುವುದು ಮತ್ತು ಪೋರ್ಟಬಲ್ ಆಮ್ಲಜನಕ ಸಾಂದ್ರಕಗಳ ಸಂಗ್ರಹವು ಬೇಡಿಕೆಗೆ ಅನುಗುಣವಾಗಿ ಆಮ್ಲಜನಕದ ಪೂರೈಕೆಯನ್ನು ಬಹಳವಾಗಿ ಹೆಚ್ಚಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.