ಬೆಂಗಳೂರು: ರಾಜ್ಯದಲ್ಲಿ ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿ ವಯೋಮಿತಿಯನ್ನು 21 ವರ್ಷದಿಂದ 26 ವರ್ಷಕ್ಕೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಸರ್ಕಾರದ ಈ ಕ್ರಮವನ್ನು ಪ್ರಶ್ನೆ ಮಾಡಿ ಡಾ. ವಿಕಾಸ ಗೌಡ ಮತ್ತು ಇತರರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ನ್ಯಾಯಪೀಠ, ಸರ್ಕಾರದ ಈ ನಿಯಮ ನ್ಯಾಯಸಮ್ಮತ ಮತ್ತು ತರ್ಕಬದ್ಧವಾಗಿದೆ ಎಂದು ಹೇಳಿದೆ.
ಸಂವಿಧಾನದ ವಿಧಿ 14 ಮತ್ತು 16 ಕ್ಕೆ ವಿರುದ್ದವಾಗಿಲ್ಲ. ಜೊತೆಗೆ ಸದ್ಯದ ಕೊರೋನಾ ನಿರ್ವಹಿಸಲು ಅನುಭವವುಳ್ಳ ವೈದ್ಯಾಧಿಕಾರಿಗಳನ್ನು ನೇಮಕ ಮಾಡುವುದಕ್ಕೂ ಈ ತಿದ್ದುಪಡಿ ನಿಯಮ ಅನುಕೂಲವಾಗಿದ್ದು, ಈ ನಿಯಮವನ್ನು ಪುರಸ್ಕರಿಸಿ ಅರ್ಜಿದಾರರ ಮನವಿಯನ್ನು ವಜಾ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.