ಶಿವಮೊಗ್ಗ: ಜಿಲ್ಲೆಯ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ 2020 ನವೆಂಬರ್ 26 ರಂದು ನಡೆದ ಕ್ಯಾಬಿನೆಟ್ನಲ್ಲಿ ಈ ಸಂಬಂಧ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸ್ಲಂ ನಿವಾಸಿಗಳಿಗೂ ಹಕ್ಕುಪತ್ರ ವಿತರಣೆ ಸರ್ಕಾರದ ಉದ್ದೇಶವಾಗಿದ್ದು, ಇದೊಂದು ಐತಿಹಾಸಿಕ ನಿರ್ಣಯ ಎಂದು ಅವರು ಹೇಳಿದ್ದಾರೆ.
ಸ್ಲಂ ಗಳಲ್ಲಿ ಅನೇಕ ವರ್ಷಗಳಿಂದ ಜೀವನ ನಡೆಸುತ್ತಿರುವ ಜನರ ಬದುಕಿನ ಜೊತೆಗೆ ಹೆಸರಿನಲ್ಲಿಯೂ ಸ್ಲಂ ಸೇರಿಕೊಂಡಿದೆ. ಇದೀಗ ಅವರಿಗೆ ಹಕ್ಕುಪತ್ರ ವಿತರಿಸುವ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದ್ದು, ಇದರಿಂದ ಅವರಿಗೆ ಅನುಕೂಲ ಆಗಲಿದೆ ಎಂದು ಈಶ್ವರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.