ಬೆಂಗಳೂರು: ಜಿಲ್ಲೆಯಲ್ಲಿ ಕೊರೋನಾ ಲಸಿಕೆ ಸರಬರಾಜು ಮಾಡುವಲ್ಲಿ ವ್ಯತ್ಯಯವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತ್ರವೇ ಸದ್ಯದ ಸ್ಥಿತಿಯಲ್ಲಿ ಲಸಿಕೆಗಳನ್ನು ನೀಡಲಾಗುವುದು ಎಂದು ಮೂಲಗಳು ಹೇಳಿವೆ.
ಲಸಿಕೆ ಪಡೆಯಲು ಬರುವ ಫಲಾನುಭವಿಗಳಿಗೆ ಏಕಕಾಲಕ್ಕೆ ಲಸಿಕೆ ನೀಡಲು ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ. ಈಗಾಗಲೇ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ನೀಡಲಾಗುತ್ತದೆ. ಲಭ್ಯತೆಯನ್ನಾಧರಿಸಿ 45 – 60 ವರ್ಷ ಮೇಲ್ಪಟ್ಟವರಿಗೆ, ಈಗಾಗಲೇ ನೋಂದಣಿ ಮಾಡಿಸಿಕೊಂಡಿದ್ದವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಸ್ಥಳದಲ್ಲೇ ನೋಂದಾಯಿಸಲು ಅವಕಾಶ ಇರುವುದಿಲ್ಲ. ಸರ್ಕಾರಿ ಆರೋಗ್ಯ ಕೇಂದ್ರ ಹೊರತಾದಂತೆ ಸಂಘ ಸಂಸ್ಥೆಗಳಿಗೆ ಹೊರವಲಯದಲ್ಲಿ ಲಸಿಕೆ ನೀಡಲು ಅವಕಾಶ ಇಲ್ಲ. 18 ವರ್ಷ ಮೇಲ್ಪಟ್ಟವರಿಗೂ ನೋಂದಣಿ ಕಡ್ಡಾಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.