ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ರಾಜ್ಯದಲ್ಲಿ ಉಲ್ಬಣಗೊಂಡಿರುವ ಕೊರೋನಾ ಪರಿಸ್ಥಿತಿ, ಪರಿಣಾಮಗಳ ಮಾಹಿತಿಯನ್ನು ಅಧಿಕಾರಿಗಳು, ತಜ್ಞರು ಮುಖ್ಯಮಂತ್ರಿಗಳಿಗೆ ನೀಡಿದರು. ಕೊರೋನಾ ಸೋಂಕು ಹರಡುವ ಸರಪಳಿಯನ್ನು ಮುರಿಯುವ ಸಲುವಾಗಿ ಜಾರಿಗೊಳಿಸಲಾದ ಜನತಾ ಕರ್ಫ್ಯೂ, ಇನ್ನಿತರ ನಿಯಂತ್ರಣ ಕ್ರಮಗಳ ಬಗೆಗೂ ಈ ಸಂದರ್ಭದಲ್ಲಿ ಅವಲೋಕನ ನಡೆಸಲಾಯಿತು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಆರ್. ಅಶೋಕ್, ಸಚಿವ ಡಾ. ಕೆ. ಸುಧಾಕರ್, ಬೈರತಿ ಬಸವರಾಜ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿ @BSYBJP ರವರು ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು. (1/2)#KarnatakaFightsCorona #Unite2FightCorona pic.twitter.com/BVwpGL5oA7
— CM of Karnataka (@CMofKarnataka) April 29, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.