ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3 ಲಕ್ಷಕ್ಕೂ ಅಧಿಕವಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ ಮಾಡಲು 14 ದಿನಗಳ ಕರ್ಫ್ಯೂ ಹೇರಲಾಗಿದೆ. ಈ ಸಂದರ್ಭದಲ್ಲಿ ಎಲ್ಲರೂ ಕರ್ಫ್ಯೂ ನಿರ್ಬಂಧಗಳನ್ನು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ ನಿಯಮವನ್ನು ಜನರು ಯಾವ ರೀತಿಯಲ್ಲಿ ಪಾಲನೆ ಮಾಡುತ್ತಿದ್ದಾರೆ. ವಾಹನ ಸಂಚಾರ, ಜನ ಸಂಚಾರ ಹೇಗಿದೆ, ಕರ್ಫ್ಯೂವನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದಾರೆಯೇ ಎಂಬಿತ್ಯಾದಿ ಅಂಶಗಳನ್ನು ಪರಿಶೀಲನೆ ನಡೆಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಕೆಲವು ಕಡೆಗಳಲ್ಲಿ ಕೊರೋನಾ ಕರ್ಫ್ಯೂ ಅನ್ನು ಜನರು ಗಂಭೀರವಾಗಿ ತೆಗೆದುಕೊಂಡಿಲ್ಲ. ಬದಲಾಗಿ ಅನಗತ್ಯ ಓಡಾಟ ನಡೆಸುವ ಮೂಲಕ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಈ ಸಂಬಂಧ ಮಾಧ್ಯಮಗಳು ಸಹ ವರದಿ ಬಿತ್ತರಿಸುತ್ತಿವೆ. ನಿಯಮ ಮೀರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 14 ದಿನಗಳಲ್ಲಿ ಕೊರೋನಾ ನಿಯಂತ್ರಣವಾಗದಿದ್ದಲ್ಲಿ ಕರ್ಫ್ಯೂ ಮುಂದುವರಿಸಬೇಕಾಗಬಹುದು. ಹಾಗಾಗಿ ಹೆಚ್ಚು ಎಚ್ಚರ ವಹಿಸುವಂತೆ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.