ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ತೊಡಗಿದಂತೆ ಬೆಳಗ್ಗೆ 6 ರಿಂದ ರಾತ್ರಿ 8 ರ ವರೆಗೆ ಕಾರ್ಯ ನಿರ್ವಹಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರು ಪರಿಷ್ಕೃತ ಆದೇಶವನ್ನು ಪ್ರಕಟಿಸಿದ್ದಾರೆ. ಆ ಮೂಲಕ ನಂದಿನಿ ಹಾಲು ಮಾರಾಟದ ಡೈರಿಗಳನ್ನು ತೆರೆದಿಡಬಹುದು ಎಂದು ಅವರು ಈ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹದ್ದು ಮೀರುತ್ತಿರುವ ಹಿನ್ನೆಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಅಗತ್ಯ ಸೇವೆಗಳನ್ನು ಪ್ರತಿನಿತ್ಯ ಬೆಳಗ್ಗೆ 6 -10 ಗಂಟೆಯವರೆಗೆ ತೆರೆದಿಡಲು ಅನುಮತಿ ನೀಡಲಾಗಿತ್ತು. ಇದೀಗ ನಂದಿನಿ ಹಾಲು ಮಾರಾಟಕ್ಕೆ ಸಂಬಂಧಿಸಿದಂತೆ ಈ ಪರಿಷ್ಕೃತ ಆದೇಶ ಪ್ರಕಟಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.