ಬೆಂಗಳೂರು: ಸೇನಾ ಆಸ್ಪತ್ರೆಗಳಲ್ಲಿ ಇರುವ ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗೆ ಒದಗಿಸುವ ಸಂಬಂಧ ಸೇನಾಧಿಕಾರಿಗಳ ಜೊತೆ ಸಭೆ ನಡೆಸಿ , ತೀರ್ಮಾನ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.
ಕಡಿಮೆ ಪ್ರಮಾಣದಲ್ಲಿ ಹಾಸಿಗೆಗಳನ್ನು ಹೆಚ್ಚಿಸುವುದರಿಂದ ದೊಡ್ಡ ಮಟ್ಟದ ಬದಲಾವಣೆ ಆಗದು. ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಅದರ ನಿಯಂತ್ರಣ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಬಿಬಿಎಂಪಿ ಮತ್ತು ಸರ್ಕಾರ ಕೋವಿಡ್ ಆಸ್ಪತ್ರೆಗಳ ಮುಂದೆ ಶಾಶ್ವತ ಹೆಲ್ಪ್ ಡೆಸ್ಕ್ ಆರಂಭಿಸುವಂತೆಯೂ ಕೋರ್ಟ್ ಸೂಚಿಸಿದೆ.
ಅಲ್ಲದೆ ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸೇನೆ ಸದಾ ಸಹಾಯಕ್ಕೆ ನಿಲ್ಲುತ್ತದೆ. ಕೊರೋನಾ ಸಂದರ್ಭದಲ್ಲಿ ಸಹ ಸೇನೆ ಶೀಘ್ರ ಸ್ಪಂದನೆ ನೀಡುವ ಆಶಯವಿದ್ದು, ಈ ಸಂಬಂಧ ಸೇನಾಧಿಕಾರಿಗಳ ಜೊತೆ ಮಾತುಕತೆ ನಡೆಸಲು ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.