ನವದೆಹಲಿ: ಕೊರೋನಾವೈರಸ್ ಮಹಾಮಾರಿ ತಾಂಡವಾಡುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ವರ್ಗದ ಜನರು ಕೂಡ ತೊಂದರೆಗೆ ಸಿಲುಕಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೊರೋನಾ ಆತಂಕ ಭೀತಿಗೊಳಪಡಿಸುತ್ತಿದೆ. ಇದಕ್ಕೆ ಗರ್ಭಿಣಿ ಸ್ತ್ರೀಯರು ಕೂಡ ಹೊರತಾಗಿಲ್ಲ.
ಈ ಹಿನ್ನೆಲೆಯಲ್ಲಿ ಭಾರತದಲ್ಲಿನ ಗರ್ಭಿಣಿ ಮಹಿಳೆಯರಿಗೆ ತುರ್ತು ವೈದ್ಯಕೀಯ ನೆರವು ನೀಡಲು ರಾಷ್ಟ್ರೀಯ ಮಹಿಳಾ ಆಯೋಗವು ವಾಟ್ಸಾಪ್ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದೆ. ಸಂಖ್ಯೆ 9354954224.
ಗರ್ಭಿಣಿಯರು ವೈದ್ಯಕೀಯ ನೆರವು ಪಡೆಯುವಲ್ಲಿ ತೊಂದರೆ ಎದುರಿಸುತ್ತಿರುವುದನ್ನು ಎನ್ಸಿಡಬ್ಲ್ಯೂ ಗಮನಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ದೇಶಾದ್ಯಂತದ ನಿರೀಕ್ಷಿತ ತಾಯಂದಿರು ಈ ಸಂಖ್ಯೆಯ ಮೂಲಕ ಆಯೋಗವನ್ನು ತಲುಪಬಹುದು, ಅದು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಮೀಸಲಾದ ತಂಡವು ಕುಂದುಕೊರತೆಗಳಿಗೆ ತ್ವರಿತ ಪರಿಹಾರವನ್ನು ನೋಡಿಕೊಳ್ಳುತ್ತಿದೆ. Helpatncw@gmail.com ಇಮೇಲ್ ಮೂಲಕವೂ ಆಯೋಗವನ್ನು ತಲುಪಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.