ಬೆಂಗಳೂರು: ಹೊಸ ಆವಿಷ್ಕಾರ ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಪ್ರಕ್ರಿಯೆ ನಡೆಸುವ ಯಂತ್ರವನ್ನು ಸಿಎಂ ಬಿ ಎಸ್ ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಇಡೀ ದೇಶವೇ ಕೊರೋನಾ ಸಂಕಷ್ಟಕ್ಕೆ ನಲುಗಿದೆ. ಇದರ ನಿಯಂತ್ರಣ ಭಾಗವಾಗಿ ತಂತ್ರಜ್ಞಾನದ ಮೂಲಕ ಔಷಧ ತಲುಪಿಸಲು ಮುಂದಾಗಲಿದೆ. 45 ಕೆಜಿಗಳಷ್ಟು ಭಾರ ಹೊತ್ತು ಹಾರುವ ಡ್ರೋಣ್ ಗಳು ಸಹ ರಾಜ್ಯದಲ್ಲಿ ಕಾರ್ಯಾಚರಣೆ ಮಾಡುತ್ತಿವೆ. ಗರುಡ ಸಂಸ್ಥೆ ಈ ಸೇವೆಯನ್ನು ಉಚಿತವಾಗಿ ನೀಡುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಎಂಬ ಸುದ್ದಿಗೆ ಸ್ಪಷ್ಟನೆ ನೀಡಿದ ಅವರು, ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಆದ ನಂತರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಲಸಿಕೆ ಲಭ್ಯತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಅಗತ್ಯ ಪ್ರಯತ್ನ ನಡೆಸುತ್ತಿವೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.