News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

5 ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ನಾಳೆ: ಸಕಲ ಸಿದ್ಧತೆ

ನವದೆಹಲಿ: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ನಾಳೆ ವಿಧಾನಸಭಾ ಚುನಾವಣೆಯ  ಮತ ಎಣಿಕೆ ಕಾರ್ಯ ನಡೆಯಲಿದೆ. ಇದಕ್ಕಾಗಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಅಂತಿಮಗೊಳಿಸಲಾಗುತ್ತಿದೆ. ಇದಲ್ಲದೆ, ಏಕಕಾಲದಲ್ಲಿ ನಡೆದ ನಾಲ್ಕು ಲೋಕಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶವೂ ಹೊರಬೀಳಲಿದೆ.

ಎಣಿಕೆಯ ಟ್ರೆಂಡ್‌ಗಳು ಮತ್ತು ಫಲಿತಾಂಶಗಳು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ ಮತ್ತು ಪ್ರತಿ ಕ್ಷೇತ್ರದ ಫಲಿತಾಂಶಗಳ ಟ್ರೆಂಡ್  ಪ್ರತಿ ಕೆಲವು ನಿಮಿಷಗಳಿಗೊಮ್ಮೆ ನವೀಕರಿಸಲಾಗುತ್ತದೆ.  ಫಲಿತಾಂಶಗಳನ್ನು “Voter helpline” ಮೊಬೈಲ್ ಅಪ್ಲಿಕೇಶನ್ ಮೂಲಕವೂ ಪ್ರವೇಶಿಸಿ ತಿಳಿಯಬಹುದು.

ಸಾಂಕ್ರಾಮಿಕ ರೋಗದ ಎರಡನೇ ಅಲೆಯ ದೃಷ್ಟಿಯಿಂದ ಎಣಿಕೆಯ ಸಮಯದಲ್ಲಿ ಸಂಪೂರ್ಣವಾಗಿ ಕೋವಿಡ್ ಸುರಕ್ಷಿತ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ, ಚುನಾವಣಾ ಆಯೋಗವು ಎಣಿಕೆಯ ದಿನಕ್ಕೆ ಕಟ್ಟುನಿಟ್ಟಾದ ಕೋವಿಡ್ ಪ್ರೋಟೋಕಾಲ್‌ಗಳನ್ನು ಹೊರತಂದಿದೆ.‌

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top