ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.
ಇಂದಿನಿಂದಲೇ ಈ ನೂತನ ಮಾರ್ಗಸೂಚಿ ಅನ್ವಯವಾಗಲಿದ್ದು, ಇದರಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಹಣ್ಣು ತರಕಾರಿ ಬೆಳೆಗಾರರಿಗೆ ತಳ್ಳುಗಾಡಿಯಲ್ಲಿ ಮಾರಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಎಪಿಎಂಸಿ ಮತ್ತು ದಿನಸಿ ಅಂಗಡಿಗಳ ವ್ಯಾಪಾರ ಸಮಯದಲ್ಲೂ ಬದಲಾವಣೆ ಮಾಡಲಾಗಿದ್ದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.
ಈ ಹಿಂದಿನ ಮಾರ್ಗಸೂಚಿಯಲ್ಲಿ ಬೆಳಿಗ್ಗೆ 6 – 10 ರ ವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಇದರಿಂದ ರೈತರು ತಾವು ಬೆಳೆದ ಬೆಳೆಗೆ ಪೂರಕ ಮಾರುಕಟ್ಟೆ ದೊರೆಯದೆ ಸಂಕಷ್ಟ ಅನುಭವಿಸುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಈ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.