ಬೆಂಗಳೂರು: ರಾಜ್ಯದಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆದಿದ್ದ ಉಪಚುನಾವಣೆ ಮತ್ತು ದೇಶಕ್ಕೆ ಸಂಬಂಧಿಸಿದಂತೆ ಪಂಚರಾಜ್ಯಗಳಲ್ಲಿ ನಡೆದಿದ್ದ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಘೋಷಣೆಯಾಗಿದೆ. ಈ ತುರ್ತಿನ ನಡುವೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯಕ್ಕೆ ರಾಜ್ಯಕ್ಕೆ ಕೊರೋನಾ ಸೋಂಕಿತರ ಚಿಕಿತ್ಸೆಗೆ 30 ಮೆಟ್ರಿಕ್ ಟನ್ ಆಮ್ಲಜನಕ ತರುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಿ, ಸಫಲರಾಗಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆಗೆ ಆಮ್ಲಜನಕ ಒದಗಿಸುವ ಸಂಬಂಧ ನಿರಂತರ ಸಂಪರ್ಕ ಸಾಧಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಾಜ್ಯಕ್ಕೆ ಅತ್ಯಗತ್ಯವಾದ ಆಮ್ಲಜನಕ ಕೊರತೆ ನೀಗಿಸುವಲ್ಲಿ ಅಗತ್ಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ 30 ಮೆಟ್ರಿಕ್ ಟನ್ ಗಳಷ್ಟು ಆಮ್ಲಜನಕ ದೊರೆಯಲಿದೆ.
ಭುವನೇಶ್ವರದಿಂದ ರಾಜ್ಯಕ್ಕೆ ತಲಾ 15 ಮೆ. ಟನ್ಗಳಂತೆ ಒಟ್ಟು 2 ಟ್ಯಾಂಕರ್ಗಳಲ್ಲಿ ಒಟ್ಟು 30 ಟನ್ಗಳಷ್ಟು ಆಮ್ಲಜನಕ ಬಂದಿಳಿಯಲಿದೆ. ಚುನಾವಣಾ ಫಲಿತಾಂಶದ ನಡುವೆಯೂ ಸಿಎಂ ಯಡಿಯೂರಪ್ಪ ಅವರ ಈ ಕರ್ತವ್ಯ ನಿಷ್ಠೆ ಸದ್ಯ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಪಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.