ಬೆಂಗಳೂರು: ಚಾಮರಾಜನಗರಕ್ಕೆ ಪೂರೈಕೆಯಾಗಬೇಕಿದ್ದ ನಿಗದಿತ ಪ್ರಮಾಣದ ಆಮ್ಲಜನಕ ಜಿಲ್ಲೆಗೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ತಪ್ಪಿತಸ್ಥರನ್ನು ಶೀಘ್ರ ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ, ಸಿಎಂ ಯಡಿಯೂರಪ್ಪ ಅವರ ಪ್ರಧಾನ ಕಾರ್ಯದರ್ಶಿ, ರಾಜ್ಯ ಆಮ್ಲಜನಕ ಪೂರೈಕೆಯ ಉಸ್ತುವಾರಿ ಅಧಿಕಾರಿ ಡಿಐಜಿ ಪ್ರತಾಪ್ ರೆಡ್ಡಿ ಅವರೊಂದಿಗೆ ಸಭೆ ನಡೆಸಿದ್ದು, ಜಿಲ್ಲೆಗೆ ಯಾವುದೇ ಲೋಪಗಳಿಲ್ಲದೆ ನಿಗದಿತ ಪ್ರಮಾಣದ ಆಮ್ಲಜನಕ ಸಕಾಲಕ್ಕೆ ಪೂರೈಕೆ ಮಾಡುವಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಚಾಮರಾಜನಗರಕ್ಕೆ ಆಮ್ಲಜನಕ ಪೂರೈಕೆಯಲ್ಲಿನ ವ್ಯತ್ಯಯ, ಗೊಂದಲಗಳನ್ನು ನಿವಾರಣೆ ಮಾಡಿ, ಸುಲಲಿತ ಸರಬರಾಜಿಗೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ಸಚಿವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.