News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಳೆದ 24 ಗಂಟೆಗಳಲ್ಲಿ ದೇಶದ ಕೋವಿಡ್ ಪ್ರಕರಣ 3,68,147ಕ್ಕೆ ಇಳಿಕೆ

ನವದೆಹಲಿ: ಭಾರತವು ದೈನಂದಿನ ಕೊರೋನಾವೈರಸ್ ಪ್ರಕರಣಗಳಲ್ಲಿ‌ ಕೊಂಚ ಕುಸಿತವನ್ನು ಕಂಡಿದ್ದು, ಸೋಮವಾರ 3,68,147 ಹೊಸ ಸೋಂಕುಗಳನ್ನು ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,417 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ.

ಹೊಸ ಪ್ರಕರಣಗಳಲ್ಲಿ ಸುಮಾರು 49% ರಷ್ಟು ಮಹಾರಾಷ್ಟ್ರ, ಕರ್ನಾಟಕ, ಕೇರಳ, ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ವರದಿಯಾಗಿದೆ.

ಭಾರತದ ಒಟ್ಟು ಕೋವಿಡ್ -19 ಪ್ರಕರಣಗಳು ಈಗ 1,99,25,604 ಆಗಿದ್ದು, ಇದರಲ್ಲಿ 34,13,642 ಸಕ್ರಿಯ ಪ್ರಕರಣಗಳು ಮತ್ತು ಒಟ್ಟು 2,18,959 ಸಾವುಗಳು ಸಂಭವಿಸಿವೆ.  ಕಳೆದ 24 ಗಂಟೆಗಳಲ್ಲಿ 3,00,732 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 12,10,346 ಜನರು ಲಸಿಕೆಗಳನ್ನು ಪಡೆದಿದ್ದಾರೆ. ಈವರೆಗೆ ಒಟ್ಟು 15,71,98,207 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕರೋನವೈರಸ್ ಪ್ರಕರಣಗಳ ತೀವ್ರ ಏರಿಕೆಯ ಮಧ್ಯೆ ಹರಿಯಾಣದಲ್ಲಿ ಸೋಮವಾರದಿಂದ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸಲಾಗಿದೆ. ಈ ನಡುವೆ, ಸುಪ್ರೀಂಕೋರ್ಟ್ ತನ್ನ ಲಸಿಕೆ ಖರೀದಿ ನೀತಿಯನ್ನು ಮರುಪರಿಶೀಲಿಸುವಂತೆ ಕೇಂದ್ರವನ್ನು ಕೋರಿದೆ. ಅಲ್ಲದೇ, ಸಾರ್ವಜನಿಕ ಕಲ್ಯಾಣದ ಹಿತದೃಷ್ಟಿಯಿಂದ ಎರಡನೇ ಅಲೆಯ ವೈರಸ್ ಅನ್ನು ತಡೆಗಟ್ಟಲು ದೇಶವ್ಯಾಪಿ ಲಾಕ್‌ಡೌನ್ ಹೇರುವುದನ್ನು ಪರಿಗಣಿಸುವಂತೆ ಕೇಂದ್ರ ಮತ್ತು ರಾಜ್ಯಗಳನ್ನು ಒತ್ತಾಯಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top