ಬೆಂಗಳೂರು: ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ 23 ಜನಲ ಸಾವಿಗೆ ಕಾರಣವಾದ ಹಿನ್ನೆಲೆ ಪತ್ತೆ ಹಚ್ಚಿ ಮೂರು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಸಿದೆ.
ಈ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮುಂದಿನ ಮೂರು ದಿನಗಳಲ್ಲಿ ವರದಿ ನೀಡುವಂತೆಯೂ ಅವರಿಗೆ ಸೂಚಿಸಲಾಗಿದೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಆಮ್ಲಜನಕ ಸಿಲಿಂಡರ್ ಖಾಲಿಯಾಗಿ ಆತಂಕ ಸೃಷ್ಟಿಯಾಗಿತ್ತು. ಇದರಿಂದ 23 ರೋಗಿಗಳು ಮೃತಪಟ್ಟಿದ್ದಾರೆ. 12 ಮಂದಿ ರೋಗಿಗಳ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಭಾನುವಾರ ಮುಂಜಾನೆಯಿಂದ ಸೋಮವಾರ ಮುಂಜಾನೆಯ ವರೆಗೆ 23 ಮಂದಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.