ಬೆಂಗಳೂರು: ಈವರೆಗೆ ಬಿ ಯು ನಂಬರ್ ಪಡೆದು ಬಿಬಿಎಂಪಿ ಮುಖೇನ ಆಸ್ಪತ್ರೆಗೆ ದಾಖಲಾಗುವ ಕೊರೋನಾ ಸೋಂಕಿತರ ಚಿಕಿತ್ಸೆಗೆ ಉಚಿತವಾಗಿ ದೊರೆಯುವ ಹಾಸಿಗೆ ಮಾಹಿತಿ, ನಿರ್ವಹಣೆ ಮೊದಲಾದವುಗಳ ಮಾಹಿತಿ ದೊರೆಯುತ್ತಿದ್ದ ಪೋರ್ಟಲ್ನಲ್ಲಿ ಇನ್ನು ಮುಂದೆ ಸ್ವತಃ ವೆಚ್ಚ ಭರಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಹಾಸಿಗೆಗಳ ಬಗೆಗೂ ಮಾಹಿತಿ ದೊರೆಯುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.
ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸ್ವಯಂ ವೆಚ್ಚ ಭರಿಸಿಕೊಂಡು ಚಿಕಿತ್ಸೆ ಪಡೆಯುವ ಬಗ್ಗೆ, ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಬಗ್ಗೆ ಮಾಹಿತಿ ಸಿಗುತ್ತಿರಲಿಲ್ಲ. ಇದರಿಂದಾಗಿ ರೋಗಿಗಳು ಹಾಸಿಗೆಗಳಿಗಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಇತ್ತು. ಈ ಸನ್ನಿವೇಶ ನಿವಾರಣೆಗೆ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಕೆಲವು ಆಸ್ಪತ್ರೆಗಳು ವೆಂಟಿಲೇಟರ್ ಅಳವಡಿಸಿರುವ ಹಾಸಿಗೆಗಳ ಮಾಹಿತಿ ಬಿಟ್ಟುಕೊಡುತ್ತಿರಲಿಲ್ಲ. ಇಂತಹ ಹಾಸಿಗೆಗಳನ್ನು ಕಾಯ್ದಿರಿಸಿಕೊಂಡು ಚಿಕಿತ್ಸೆಗೆ ಹೆಚ್ಚು ಹಣ ಭರಿಸುವವರಿಗೆ ಅದನ್ನು ಒದಗಿಸುತ್ತಿದ್ದವು. ಹಾಸಿಗೆ ಹಂಚಿಕೆಯಲ್ಲಿ ಪಾರದರ್ಶಕತೆ ಕಾಪಾಡಲು ಈ ಅನುಕೂಲ ಕಲ್ಪಿಸಿರುವುದಾಗಿ ಬಿಬಿಎಂಪಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.