ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಕೆ ಮಾಡುವ ರೆಮ್ಡೆಸಿವಿರ್ ಲಸಿಕೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಳಿ ಬರುತ್ತಿದ್ದು, ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ರೆಮ್ಡೆಸಿವಿರ್ ಔಷಧದ ಕೊರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.
ಈ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಅಕ್ರಮ ತಡೆಯುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸರಿಯಾದ ರೀತಿಯಲ್ಲಿ ಸರ್ಕಾರ ಸಹ ಸಮಗ್ರ ತನಿಖೆ ನಡೆಸಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿಗಳ ಬಗ್ಗೆ ಮಾತುಕತೆ ನಡೆಸಲು ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೊರೋನಾ ಸ್ಥಿತಿಗತಿ, ಕರ್ಫ್ಯೂ ಬಗ್ಗೆ ಮಹತ್ವದ ಮಾತುಕತೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.