ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರ ಮೇಲೆ, ಬಿಜೆಪಿ ಕಚೇರಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಈಗಾಗಲೇ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಶ್ಚಿಮಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರಿಗೆ ಕರೆಮಾಡಿ ಹಿಂಸಾಚಾರದ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಉಲ್ಬಣಿಸಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಎಂದು ಧಂಕರ್ ಹೇಳಿದ್ದಾರೆ.
https://twitter.com/jdhankhar1/status/1389496563916025857
ರಾಜ್ಯಪಾಲ ಧಂಕರ್ ಅವರು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ರಾಜ್ಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಡಿಜಿಪಿ ಮತ್ತು ಕೋಲ್ಕತ್ತದ ಪೊಲೀಸ್ ಆಯುಕ್ತರು ಹಿಂಸಾಚಾರದ ಬಗ್ಗೆ ನೀಡಿರುವ ವರದಿಯನ್ನು ಪಶ್ಚಿಮಬಂಗಾಳದ ಮುಖ್ಯ ಕಾರ್ಯದರ್ಶಿ ತನಗೆ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ಚುನಾವಣೆ ಫಲಿತಾಂಶದ ನಂತರ ಪಶ್ಚಿಮ ಬಂಗಾಳದಲ್ಲಿ ಯಾಕೆ ಹಿಂಸಾಚಾರ ಭುಗಿಲೇಳುತ್ತಿದೆ? ಉಳಿದ ರಾಜ್ಯಗಳಲ್ಲಿ ಯಾಕೆ ಹಿಂಸಾಚಾರ ನಡೆದಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಟಿಎಂಸಿ ಪಕ್ಷದ ಗೂಂಡಾಗಳು ನಡೆಸಿದ ಹಿಂಸಾಚಾರಕ್ಕೆ 11 ಮಂದಿ ಬಿಜೆಪಿ ಕಾರ್ಯಕರ್ತರು ಹತರಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.