ಬೆಂಗಳೂರು: ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿ, ಕರ್ಫ್ಯೂ ಮೊದಲಾದವುಗಳ ಬಗೆಗೆ ಅವಲೋಕನ ನಡೆಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಿದರು.
ಈ ಸಭೆಯಲ್ಲಿ ತಜ್ಞರ ತಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ. ಜೊತೆಗೆ ರಾಜ್ಯದಲ್ಲಿ ಮತ್ತೂ 8 ದಿನಗಳ ಕಾಲ ಬಿಗಿಕ್ರಮ ಮುಂದುವರಿಸುವಂತೆಯೂ ಶಿಫಾರಸ್ಸು ಮಾಡಿದ್ದಾರೆ. ಜನತಾ ಕರ್ಫ್ಯೂನಲ್ಲಿ ಪರಿಸ್ಥಿತಿ ಸುಧಾರಿಸದ ಹಿನ್ನೆಲೆಯಲ್ಲಿ ಮತ್ತಷ್ಟು ದಿನಗಳ ಬಿಗಿ ಲಾಕ್ಡನ್ ಮಾಡುವ ಮೂಲಕ ಕೊರೋನಾ ಚೈನ್ ಬ್ರೇಕ್ ಮಾಡಿ ಎಂದು ತಜ್ಞರ ಸಮಿತಿ ನಾಲ್ವರು ಸಚಿವರನ್ನೊಳಗೊಂಡ ಕೊರೋನಾ ಟಾಸ್ಕ್ಫೋರ್ಸ್ಗೆ ಸೂಚಿಸಿದೆ. ರಾಜ್ಯಕ್ಕೆ ಮುಂದಿನ 15 ದಿನಗಳು ನಿರ್ಣಾಯಕ ಎಂದೂ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಭೆಯಲ್ಲಿ ಆಕ್ಸಿಜನ್, ರೆಮ್ಡೆಸಿವಿರ್ ಕೊರತೆಯ ಬಗ್ಗೆಯೂ ಸಿಎಂ ಚರ್ಚೆ ನಡೆಸಿದ್ದು, ಅವುಗಳನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಿಕೊಳ್ಳುವುದಕ್ಕೆ ಪೂರಕವೆನಿಸಿದ ಕ್ರಮಗಳನ್ನು ಕೈಗೊಳ್ಳುವಂತೆಯೂ ಅಧಿಕಾರಿಗಳು, ಸಚಿವರುಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಅವುಗಳ ಆಕ್ರಮ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಇಂಥಹ ಕರ್ಮಕಾಂಡಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೆಯೇ ಕೊರೋನಾ ನಿಯಂತ್ರಣ ಆಯಾ ಜಿಲ್ಲಾ ಉಸ್ತುವಾರಿಗಳ ಜವಾಬ್ದಾರಿಯಾಗಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕ್ರಮ ವಹಿಸುವಂತೆಯೂ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿಗಳು ಆಯಾಯ ಜಿಲ್ಲೆಯಲ್ಲಿದ್ದು ಕೊರೋನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ. ಯಾವುದೇ ದುರಂತ ಸಂಭವಿಸದಂತೆ ಅಗತ್ಯ ಕ್ರಮಗಳನ್ನು ವಹಿಸುವಂತೆ ಅವರು ತಿಳಿಸಿದ್ದಾರೆ.
ಅಲ್ಲದೆ ಚಾಮರಾಜನಗರ ಆಸ್ಪತ್ರೆಯಲ್ಲಿ ನಡೆದ ದುರಂತಕ್ಕೆ ಕಾರಣರಾಜವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಬಿಎಸ್ವೈ ಭರವಸೆ ನೀಡಿದ್ದಾರೆ. ಜೊತೆಗೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಅವರು ಸಚಿವರು, ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಎಸಗುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಹ ಯಡಿಯೂರಪ್ಪ ನೀಡಿದ್ದಾರೆ.
ಹಾಗೆಯೇ ಕೊರೋನಾ ಸಂಬಂಧಿಸಿದಂತೆ ಚಿಕಿತ್ಸೆಗೆ ರೆಮ್ಡೆಸಿವಿರ್ ಆಮದಿಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಸಿಗೆಗಳ ಸಂಖ್ಯೆ ಹೆಚ್ಚಳಕ್ಕೂ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕೆ ಸಿದ್ಧತೆಗಳನ್ನು ತಕ್ಷಣದಿಂದಲೇ ಮಾಡಿಕೊಳ್ಳಬೇಕು. ವೆಂಟಿಲೇಟರ್ಗಳು, ಐಸಿಯು ಬೆಡ್ಗಳ ಸಂಖ್ಯೆ ಹೆಚ್ಚಳಕ್ಕೂ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಜೊತೆಗೆ ಬೆಡ್ಗಳ ದರ ಹೆಚ್ಚಳದ ಸಂಬಂಧವೂ ಮಾತುಕತೆ ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.