ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಇಂದು.ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ಧಾರದ ಬಳಿಕ ರಾಜ್ಯದ ಲಾಕ್ಡನ್ ನಿರ್ಧಾರ ತೀರ್ಮಾನವಾಗಲಿದೆ. ಮೇ 12 ರ ವರೆಗೆ ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಆಕ್ಸಿಜನ್, ರೆಮ್ಡೆಸಿವಿರ್, ಆಸ್ಪತ್ರೆಗಳ ಬಗ್ಗೆ, ಕೊರೋನಾ ಸೆಂಟರ್ಗಳ, ವಾರ್ ರೂಂಗಳ ಜವಾಬ್ದಾರಿ ಯನ್ನು ಕೆಲವು ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಅವರಿಗೆ ನೀಡಿದ ಜವಾಬ್ದಾರಿಯನ್ನು ಆಯಾಯ ಸಚಿವರು ಲೋಪವಿಲ್ಲದೆ ನಿರ್ವಹಣೆ ಮಾಡುವಂತೆ ಅವರು ಸೂಚಿಸಿದ್ದಾಗಿ ತಿಳಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ಕೊರೋನಾ ಜಿಲ್ಲಾ ಉಸ್ತುವಾರಿಗಳು ಆಯಾಯ ಜಿಲ್ಲೆಯಲ್ಲೇ ಇದ್ದು, ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ. ಆ ಎಲ್ಲಾ ಸ್ವಾತಂತ್ರ್ಯ ಅವರಿಗೆ ನೀಡಲಾಗಿದೆ ಎಂದು ಸೂಚಿಸಿದ್ದಾರೆ.
ಆಕ್ಸಿಜನ್ ಸರಬರಾಜು ಉಸ್ತುವಾರಿ ಸಚಿವರದ್ದೇ ಜವಾಬ್ದಾರಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ರಾಜ್ಯಕ್ಕೆ ಅಗತ್ಯವಿರುವ ಔಷಧಗಳನ್ನು ಒದಗಿಸಲಾಗುವುದು. ಇವುಗಳಲ್ಲಿ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚಾಮರಾಜನಗರ ಘಟನೆಯ ತಪ್ಪಿತಸ್ಥರಿಗೂ ಕಠಿಣ ಶಿಕ್ಷೆ ನೀಡುವುದಾಗಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳಿಗೆ ಫ್ರಂಟ್ಲೈನ್ ವರ್ಕರ್ಸ್ ಎಂಬ ಮಾನ್ಯತೆಯಡಿ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ರಾಜ್ಯಕ್ಕೆ ಹೆಚ್ಚಿನ ಆಕ್ಸಿಜನ್ ಪೂರೈಕೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.