News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಕೋರಿ ಸುಪ್ರೀಂಕೋರ್ಟ್‌ಗೆ ಎನ್‌ಜಿಓ ಅರ್ಜಿ

ನವದೆಹಲಿ:  ಪಶ್ಚಿಮ ಬಂಗಾಳ ರಾಜ್ಯದಲ್ಲಿ ಟಿಎಂಸಿ ಚುನಾವಣೆಯಲ್ಲಿ ಗೆದ್ದ ಬಳಿಕ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ಹಲ್ಲೆ ನಡೆಸುತ್ತಿದ್ದಾರೆ. ಈಗಾಗಲೇ ಹಲವು ಬಿಜೆಪಿಗರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಇಂಡಿಕ್‌ ಕಲೆಕ್ಟಿವ್‌ ಟ್ರಸ್ಟ್‌ ಎಂಬ ಎನ್‌ಜಿಓ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿ ಪಶ್ಚಿಮಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ತರುವಂತೆ ಮನವಿ ಮಾಡಿದೆ.

ಮೇ 2 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ಸದಸ್ಯರ ವಿರುದ್ಧ ತೃಣಮೂಲ ಕಾಂಗ್ರೆಸ್ ಅನುಯಾಯಿಗಳು ರಾಜ್ಯದಾದ್ಯಂತ ವ್ಯಾಪಕ ಹಿಂಸಾಚಾರ ನಡೆಸಿದ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲಾಗಿದೆ.

“ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಸಾಂವಿಧಾನಿಕ ಯಂತ್ರೋಪಕರಣಗಳು 356 ನೇ ವಿಧಿಯ ಅರ್ಥದಲ್ಲಿ ಸಂಪೂರ್ಣ ಮುರಿದು ಬಿದ್ದಿವೆ ಎಂದು ಘೋಷಿಸಿ, ಈ ಕಾಯ್ದೆ ಅಡಿಯಲ್ಲಿ ರಾಷ್ಟ್ರಪತಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ” ಎಂದು ಅರ್ಜಿದಾರರು ವಿನಂತಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಉದ್ದೇಶಿತ ಹತ್ಯಾಕಾಂಡದಲ್ಲಿ ರಾಜಕಾರಣಿಗಳ ಪಾಲ್ಗೊಳ್ಳುವಿಕೆಯನ್ನು ಪರಿಶೀಲಿಸಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲು ಅರ್ಜಿದಾರರು ಕೋರಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top