ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆಯಿಂದ ಜನರು ತತ್ತರಿಸಿದ್ದಾರೆ. ಇಂತಹ ಕಠಿಣ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರು, ವೈದ್ಯಕೀಯ ವಲಯ ಪ್ರಾಣ ಒತ್ತೆ ಇಟ್ಟು ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ಕೆಲಸವನ್ನು ಮಾಡುತ್ತಿವೆ.
ಈ ಸಂಬಂಧ ಕೊರೋನಾ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿರುವ ವೈದ್ಯರು, ವೈದ್ಯೇತರ ಸಿಬ್ಬಂದಿ ಮತ್ತು ಅವರ ಕುಟುಂಬದವರ ಚಿಕಿತ್ಸೆಗೆ ಜಿಲ್ಲೆಗಳಲ್ಲಿನ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ 10% ಹಾಸಿಗೆಗಳನ್ನು ಮೀಸಲಿಡುವಂತೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶಿಸಿದೆ.
ಈ ಆದೇಶದ ಪ್ರತಿಯನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳ ಶಸ್ತ್ರಚಿಕಿತ್ಸಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೂ ನೀಡಲಾಗಿದೆ. ಕೊರೋನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ಸಿಬ್ಬಂದಿ ಮತ್ತು ಅವರ ಕುಟುಂಬ ವರ್ಗದ ಹಿತದೃಷ್ಟಿಯಿಂದ ಈ ಆದೇಶವನ್ನು ಇಲಾಖೆ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.