News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತದ ರೆಮೆಡೆಸ್ವಿರ್ ಉತ್ಪಾದನಾ ಸಾಮರ್ಥ್ಯ 3 ಪಟ್ಟು ಹೆಚ್ಚಳ

ನವದೆಹಲಿ: ರೆಮಿಡಿಸ್ವಿರ್‌ ಔಷಧದ ಉತ್ಪಾದನೆಯನ್ನು ದೇಶದಲ್ಲಿ ತ್ವರಿತಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ, ಭಾರತವು ರೆಮೆಡೆಸ್ವಿರ್ ಉತ್ಪಾದನಾ ಸಾಮರ್ಥ್ಯವನ್ನು 3 ಪಟ್ಟು ಹೆಚ್ಚಿಸಿ ಮಹತ್ವದ ಸಾಧನೆ ಮಾಡಿದೆ ಎಂದು ಕೇಂದ್ರ ಸಚಿವ ಮನ್ಸೂಖ್‌ ಮಾಂಡವೀಯ ತಿಳಿಸಿದ್ದಾರೆ.

ರೆಮೆಡೆಸ್ವಿರ್ ಉತ್ಪಾದನೆ ಮಾಡುವ ಘಟಕಗಳ ಸಂಖ್ಯೆಯೂ ಮೂರು ಪಟ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ದೇಶವು ಕೊರೋನಾವೈರಸ್‌ನ ಎರಡನೇ ಅಲೆ ವಿರುದ್ಧ ಹೋರಾಟ ನಡೆಸುತ್ತಿದೆ. ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ವಿರುದ್ಧದ ಚಿಕಿತ್ಸೆಯಲ್ಲಿ ಹೆಚ್ಚಾಗಿ ಬಳಸಲಾಗುವ ರೆಮಿಡಿಸ್ವಿರ್‌ ಬೇಡಿಕೆ ಕೂಡ ಹೆಚ್ಚಾಗಿದೆ. ಬೇಡಿಕೆಗೆ ಅನುಗುಣವಾಗಿ ಉತ್ಪಾದನೆ ಮಾಡಬೇಕಾದ ಜವಾಬ್ದಾರಿಯೂ ಸರ್ಕಾರದ ಮೇಲಿದೆ.

ಟ್ವಿಟ್‌ ಮಾಡಿರುವ ಮಾಂಡವೀಯ, “ರೆಮಿಡಿಸ್ವಿರ್‌ ಔಷಧದ ಉತ್ಪಾದನೆಯನ್ನು ದೇಶದಲ್ಲಿ ತ್ವರಿತಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ, ಭಾರತವು ರೆಮೆಡೆಸ್ವಿರ್ ಉತ್ಪಾದನಾ ಸಾಮರ್ಥ್ಯವನ್ನು 3 ಪಟ್ಟು ಹೆಚ್ಚಿಸಿದೆ. ಶೀಘ್ರದಲ್ಲೇ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಸರ್ಕಾರವು  ಕರೋನಾ ವಿರುದ್ಧ ಹೋರಾಡಲು  ದಣಿವರಿಯದ ಪ್ರಯತ್ನ ಮುಂದುವರೆಸಿದೆ” ಎಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top