ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂಚಿಸಿದಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಕ್ರಮ ಜಾರಿಗೊಳಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಈಗಾಗಲೇ ರಾಜ್ಯವನ್ನು ಲಾಕ್ಡೌನ್ ಮಾಡಲಾಗುತ್ತದೆ ಎಂಬ ವದಂತಿಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ವಿಚಾರವನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಬಿನೆಟ್ ಸಭೆ ನಡೆಸಿದ ಬಳಿಕ, ರಾಜ್ಯಗಳು ಏನು ಕ್ರಮ ಕೈಗೊಳ್ಳಬೇಕು ಎಂಬ ನಿರ್ಣಯ ಪ್ರಕಟಿಸುವ ಸಾಧ್ಯತೆ ಇದೆ. ಅವರ ಅಣತಿಯಂತೆ ನಾವು ನಡೆದುಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.
ಇಂದು ಸಂಜೆಯ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ನಿರ್ಣಯ ಪ್ರಕಟಿಸಲಿದೆ. ಈ ಸಂದರ್ಭದಲ್ಲಿ ಲಾಕ್ಡನ್ ಕ್ರಮ ಅನುಸರಿಸುವಂತೆ ಸೂಚಿಸಿದರೆ ಆ ಕ್ರಮವನ್ನು ರಾಜ್ಯದಲ್ಲೂ ಅಳವಡಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.