ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳು ಮುಚ್ಚಲ್ಪಟ್ಟಿದ್ದು, ಈ ಸನ್ನಿವೇಶಗಳ ಅವಲೋಕನ ನಡೆಸಿ 2020- 21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಜೂನ್ 14 ರ ವರೆಗೆ ರಜೆ ಘೋಷಿಸಲಾಗಿದೆ. ಜೂನ್ 15 ರಿಂದ ತೊಡಗಿದಂತೆ 2021- 22 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮೇ 31 ರ ವರೆಗೆ ರಜೆ ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ನಡುವೆ ಎಸ್ಎಸ್ಎಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸುವಂತೆ ಅವರು ಶಿಕ್ಷಕರಿಗೆ ಸೂಚಿಸಿದ್ದಾರೆ. ದೂರವಾಣಿ ಮೂಲಕ ವಿದ್ಯಾರ್ಥಿಗಳ ಜೊತೆಗೆ ಸಂಪರ್ಕ ಸಾಧಿಸಿ, ಅವರಿಗೆ ಪ್ರೇರೇಪಿಸುವಂತೆಯೂ ಸಚಿವರು ಸೂಚಿಸಿದ್ದಾರೆ.
ಹಾಗೆಯೇ ಮುಂದಿನ ಜೂನ್ 1 ರಿಂದ 14 ರ ವರೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿಗಳು ನಡೆಯಲಿದೆ. ಜೂನ್15 ರಿಂದ 8 – 10 ನೇ ತರಗತಿಗಳಿಗೆ ಶಾಲಾರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.