ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯನ್ನು ಎದುರಿಸುತ್ತಿರುವ ಭಾರತಕ್ಕೆ ಇಸ್ರೇಲ್ ಅಗತ್ಯ ವೈದ್ಯಕೀಯ ಪರಿಕರಗಳನ್ನು ಕಳುಹಿಸಿಕೊಟ್ಟಿದೆ. ವೈದ್ಯಕೀಯ ಸರಬರಾಜಿನ ಮೊದಲ ಶಿಪ್ಮೆಂಟ್ ಇಂದು ನವದೆಹಲಿಯನ್ನು ಬಂದು ತಲುಪಿದೆ.
ಭಾರತವು ಪ್ರತಿದಿನ 300,000 ಕ್ಕೂ ಹೆಚ್ಚು ಕರೋನವೈರಸ್ ಸೋಂಕಿನ ಪ್ರಕರಣಗಳನ್ನು ದಾಖಲಿಸುತ್ತಿರುವುದರಿಂದ, ಇಸ್ರೇಲ್ ಈ ನೆರವನ್ನು ರವಾನೆ ಮಾಡಿದೆ. ಅಲ್ಲಿನ ವಿದೇಶಾಂಗ ಸಚಿವ ಗಬಿ ಅಶ್ಕೆನಾಜಿ ಸರಬರಾಜಿನ ಚಿತ್ರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ನವದೆಹಲಿಯ ವಿದೇಶಾಂಗ ಸಚಿವಾಲಯದ ಪ್ರತಿನಿಧಿಗಳು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಭಾರತದ ಜೊತೆಗಿದೆ ಎಂದು ಇಸ್ರೇಲ್ ಪ್ರತಿಜ್ಞೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಟನ್‌ಗಳಷ್ಟು ವೈದ್ಯಕೀಯ ಉಪಕರಣಗಳನ್ನು ಭಾರತಕ್ಕೆ ಕಳುಹಿಸಲಾಗುವುದು ಎಂದಿದ್ದಾರೆ.
ಮೇ 4 ರಂದು ಇಸ್ರೇಲ್ “ಜೀವ ಉಳಿಸುವ” ವೈದ್ಯಕೀಯ ಸಾಮಗ್ರಿಗಳನ್ನು ಭಾರತಕ್ಕೆ ಕಳುಹಿಸುವುದಾಗಿ ಹೇಳಿತ್ತು.
1/3
The first shipment of medical equipment for the people of #India landed at Delhi airport this morning.
The equipment which will mainly go to Delhi's state hospital, was received by Foreign Ministry representatives. pic.twitter.com/6eEP8eW0BM— גבי אשכנזי – Gabi Ashkenazi (@Gabi_Ashkenazi) May 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.