ಬೆಂಗಳೂರು: ಕೊರೋನಾ ಸೋಂಕಿನಿಂದ ರಾಜ್ಯ ತತ್ತರಿಸಿದೆ. ಆಕ್ಸಿಜನ್ ಸಮಸ್ಯೆ ಸಹ ರಾಜ್ಯದ ವೈದ್ಯಕೀಯ ಲೋಕವನ್ನು ಕಂಗೆಡಿಸಿದ್ದು, ಆಕ್ಸಿಜನ್ ಸೇರಿದಂತೆ ಉಳಿದೆಲ್ಲಾ ಸಮಸ್ಯೆಗಳನ್ನು ಸಾಗರೋಪಾದಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿಎಂ, ರಾಜ್ಯಕ್ಕೆ ವೈದ್ಯಕೀಯ ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ತಲಾ 20 ಮೆ. ಟನ್ ಆಕ್ಸಿಜನ್ ಸಾಮರ್ಥ್ಯದ 4 ಕಂಟೈನರ್ಗಳನ್ನು ಕಳುಹಿಸಲಿದ್ದು, ಈ ಪೈಕಿ ಎರಡು ಕಂಟೇನರ್ಗಳು ಮಂಗಳೂರಿಗೆ ಬಂದಿಳಿದಿವೆ ಎಂದು ತಿಳಿಸಿದ್ದಾರೆ.
ಆಕ್ಸಿಜನ್ ಕೊರತೆಯ ಕಾರಣದಿಂದ ರಾಜ್ಯದಲ್ಲಿ ಕೊರೋನಾ ಸೋಂಕಿತರು ಮೃತಪಡುತ್ತಿದ್ದಾರೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಎರಡು ಆಕ್ಸಿಜನ್ ಕಂಟೈನರ್ಗಳನ್ನು ಕಳುಹಿಸಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.