ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ರೆಮ್ಡೆಸಿವಿರ್ ಔಷಧವನ್ನು ದಿನಕ್ಕೆ 20 ಸಾವಿರದಂತೆ ಪೂರೈಕೆ ಮಾಡಲು ನಾಲ್ಕು ಔಷಧ ಕಂಪೆನಿಗಳು ಒಪ್ಪಿಕೊಂಡಿವೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಮೈಲಾನ್, ಸಿಪ್ಲಾ, ಜ್ಯುಬಿಲಿಯೆಂಟ್ ಮತ್ತು ಸಿಂಜಿನ್ ಔಷಧ ತಯಾರಿಕಾ ಸಂಸ್ಥೆಗಳ ಜೊತೆಗೆ ಈ ಸಂಬಂಧ ಮಾತುಕತೆ ನಡೆಸಿರುವ ಅವರು, ಮುಂದಿನ ಐದು ದಿನಗಳ ಬೇಡಿಕೆ ಮತ್ತು ಆ ಬಳಿಕದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಪ್ರಮಾಣದಲ್ಲಿ ರೆಮ್ಡೆಸಿವಿರ್ ಪೂರೈಕೆ ಮಾಡುವಂತೆ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಎಲ್ಲಾ ಸಂಸ್ಥೆಗಳ ಮುಖ್ಯಸ್ಥರಿಂದ ಸಕಾರಾತ್ಮಕ ಸ್ಪಂದನೆಯೂ ದೊರೆತಿದೆ.
ಸದ್ಯ ಔಷಧ ತಯಾರಿಕಾ ಸಂಸ್ಥೆಗಳು ದಿನಕ್ಕೆ 10 ಸಾವಿರಗಳಂತೆ ರೆಮ್ಡೆಸಿವಿರ್ ಪೂರೈಕೆ ಮಾಡುತ್ತಿವೆ. ಮೇ 9 ರ ಬಳಿಕ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಔಷಧ ಪೂರೈಸುವ ಭರವಸೆಯನ್ನು ಸಂಸ್ಥೆಗಳು ನೀಡಿವೆ. ಈ ಹಿನ್ನೆಲೆಯಲ್ಲಿ ಜಾಗತಿಕ ಟೆಂಡರ್ ಕರೆಯಲಾಗಿದ್ದು, ಅದೂ ಸಹ ಈ ವಾರದಲ್ಲಿ ಅಂತಿಮವಾಗಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.