ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ಹೇರಲಾಗಿದ್ದರೂ ಸೋಂಕು ಮಾತ್ರ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಮೇ 10 ರ ಬಳಿಕ ಈಗಿರುವ ಕರ್ಫ್ಯೂ ಮುಂದುವರಿಕೆ ಅಥವಾ ಇನ್ನಿತರ ಕ್ರಮಗಳನ್ನು ಅಳವಡಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ.
ಆಯಾ ಜಿಲ್ಲೆಗಳಲ್ಲಿನ ಕೊರೋನಾ ಪರಿಸ್ಥಿತಿ ಅವಲೋಕಿಸಿ ಬಳಿಕ ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು. ಮೇ 12 ರ ವರೆಗೆ ಕೊರೋನಾ ಕರ್ಫ್ಯೂ ಯಥಾಸ್ಥಿತಿ ಮುಂದುವರಿಯಲಿದೆ ಎಂಬುದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಸರ್ಕಾರ ಲಾಕ್ಡನ್ ಸಂಬಂಧ ಹೆಚ್ಚಿನ ಆಸಕ್ತಿ ಹೊಂದಿಲ್ಲವಾದರೂ, ಕೊರೋನಾ ನಿಯಂತ್ರಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿತ್ತ ಹರಿಸುತ್ತದೆ. ಈಗಿರುವ ಜನತಾ ಕರ್ಫ್ಯೂ ಅಂತ್ಯದಲ್ಲೂ ಕೊರೋನಾ ನಿಯಂತ್ರಣ ಆಗದಿದ್ದರೆ ಮುಂದಿನ ಕಠಿಣ ಕ್ರಮಗಳ ಅಳವಡಿಕೆಗೆ ಸರ್ಕಾರ ಮುಂದಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.