ಬೆಂಗಳೂರು: ರಾಜ್ಯದಲ್ಲಿ ಉತ್ಪಾದಿಸಲಾಗುವ ಆಮ್ಲಜನಕವನ್ನು ರಾಜ್ಯಕ್ಕೇ ಬಳಕೆ ಮಾಡಿಕೊಳ್ಳುವ ಸಂಬಂಧ ಅನುಮತಿ ನೀಡುವಂತೆ ಕೇಂದ್ರ ಸಚಿವ ಪೀಯುಷ್ ಗೋಯಲ್ ಜೊತೆಗೆ ಚರ್ಚೆ ನಡೆಸಿರುವುದಾಗಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ರಾಜ್ಯದ ಆಕ್ಸಿಜನ್ ಸಮಸ್ಯೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ. ಅದನ್ನು ರಾಜ್ಯದ ಅಗತ್ಯತೆಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಕೇಂದ್ರ ಸಚಿವ ಪೀಯುಷ್ ಗೋಯಲ್ ಜೊತೆಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಆಕ್ಸಿಜನ್ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲಾಗಿದೆ. ದೇಶಕ್ಕೆ ಅರಬ್ ರಾಷ್ಟ್ರಗಳಿಂದ 80 ಮೆ. ಟನ್ ಆಕ್ಸಿಜನ್ ಬರಲಿದ್ದು, ರಾಜ್ಯಕ್ಕೆ ಸಹ ಆಕ್ಸಿಜನ್ ಸಿಗಲಿದೆ. ಆಕ್ಸಿಜನ್ ಟ್ರಾನ್ಸ್ಪೋರ್ಟ್ ವ್ಯವಸ್ಥೆ ಚುರುಕುಗೊಳಿಸಲು ಅಗತ್ಯ ಕಂಟೇನರ್ಗಳ, ಟ್ಯಾಂಕರ್ಗಳ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಆಮ್ಲಜನಕ ಪೂರೈಕೆ ಮತ್ತು ಸರಬರಾಜು ಕುರಿತಂತೆ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದು, ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಕ್ಸಿಜನ್ ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವರಲ್ಲಿ ವಿನಂತಿಸಿಕೊಂಡಿರುವುದು ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿರುವುದರ ಕುರಿತು ಇಂದಿನ ಪತ್ರಿಕಾ ವರದಿಗಳು. pic.twitter.com/vD0rxqUHSD
— Jagadish Shettar (@JagadishShettar) May 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.