ನವದೆಹಲಿ: ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವ ನಿಟ್ಟಿನಲ್ಲಿ ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚನೆ ಮಾಡಿದೆ.
ಚುನಾವಣೆ ಬಳಿಕದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ಮಾಡುವುದರ ಜೊತೆಯಲ್ಲಿ, ಸ್ಥಳೀಯ ಪರಿಸ್ಥಿತಿಗಳ ಬಗೆಗೂ ಈ ಸಮಿತಿ ವರದಿಯನ್ನು ನೀಡಲಿದೆ. ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ಕೆಲಸ ಮಾಡಲಿದೆ.
ಸಮಿತಿಯ ಸದಸ್ಯರು ಈಗಾಗಲೇ ಪಶ್ಚಿಮ ಬಂಗಾಳಕ್ಕೆ ತೆರಳಿದ್ದು, ತನಿಖಾ ಕೆಲಸವನ್ನು ಚುರುಕುಗೊಳಿಸಿದ್ದಾರೆ. ಈ ತನಿಖೆಯ ಬಳಿಕ ವರದಿ ಸಲ್ಲಿಕೆ ಮಾಡುವುದು, ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಮಿತಿಗೆ ಸೂಚಿಸಲಾಗಿದೆ. ಸರ್ಕಾರ ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಎಡವಿದರೆ ಶಿಸ್ತಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಹ ಗೃಹ ಸಚಿವಾಲಯ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.