ಸುಬ್ರಹ್ಮಣ್ಯ : ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸ್ವಾತಂತ್ರೋತ್ಸವ ಪ್ರಯುಕ್ತ ಮಾಜಿ ಸೈನಿಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮಾತನಾಡಿ, ದೇಶದ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ತಿಳಿದುಕೊಳ್ಳುವ ಅಗತ್ಯವಿದೆ.ಸ್ವಾತಂತ್ರ್ಯ ಹೋರಾಟದ ಜೊತೆಗೆ ದೇಶದ ಎಲ್ಲಾ ವಿಚಾರಗಳು ತಿಳಿದಿರಬೇಕು, ಅದರ ಜೊತೆಗೆ ದೇಶ ಪ್ರೇಮವನ್ನು ಬೆಳೆಸುವಂತಾಗಬೇಕು.ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಗ್ರಾಮಮಟ್ಟದಲ್ಲಿ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಮುಖ್ಯಅತಿಥಿಯಾಗಿದ್ದ ಗುತ್ತಿಗಾರು ಯುವಕ ಮಂಡಲ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ,ದೇಶದಲ್ಲಿ ಕಾಡುತ್ತಿರುವ ಭ್ರಷ್ಟಾಚಾರ, ಭಯೋತ್ಪಾದನೆ ಹೋರಾಟದಲ್ಲಿ ಯುವಜನತೆ ಭಾಗವಹಿಸಿ ದೇಶದ ಸ್ವಾತಂತ್ರ್ಯವನ್ನು ಅರ್ಥಗರ್ಬಿತವನ್ನಾಗಿಸಬೇಕು,ಈ ನಿಟ್ಟಿನಲ್ಲಿ ಯುವ ಸಮೂಹವು ಧನಾತ್ಮಕವಾಗಿ ಯೋಚಿಸಿ ಮುಂದುವರಿಯಬೇಕು ಎಂದರು.ಗುತ್ತಿಗಾರು ಗ್ರಾಪಂ ಸದಸ್ಯ ವೆಂಕಟ್ ವಳಲಂಬೆ ಮಾತನಾಡಿ, ದೇಶಾಭಿಮಾನದ ಜೊತೆಗೆ ಊರಿನ ಮೇಲೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಇಂದಿನ ವಿದ್ಯಾರ್ಥಿಗಳೇ ದೇಶದ ಆಸ್ತಿ ಎಂದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕ ಮೋನಪ್ಪ ಉಬಾರ್ನೀರು ಅವರಿಗೆ ಸನ್ಮಾನಿಸಿ ದೇಶದ ಸೈನಿಕರು ಇಂದಿನ ಯುವಕರಿಗೆ ಆದರ್ಶವಾಗಬೇಕು ಎಂಬ ಸಂದೇಶ ನೀಡಲಾಯಿತು.ಇದೇ ವೇಳೆ ಕಾಲೇಜಿಗೆ ಫಲಿತಾಂಶದ ಮೂಲಕ ಕೀರ್ತಿ ತಂದ ಹಿರಿಯ ವಿದ್ಯಾರ್ಥಿಗಳಾದ ದೀಪ್ತಿ ಐಪಿ, ದೀಕ್ಷಾ ಎಂಬಿ ಹಾಗೂ ರಹಿಯಾನ ಅವರನ್ನು ಸನ್ಮಾನಿಸಲಾಯಿತು.
ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಇದೇ ವೇಳೆ ಸ್ವಾತಂತ್ರೋತ್ಸವದ ಬಗ್ಗೆ ಭಾಷಣ ಮಾಡಿದರು. ವೇದಿಕೆಯಲ್ಲಿ ಗ್ರಾಪಂ ಸದಸ್ಯರುಗಳಾದ ವೆಂಕಟ್ ವಳಲಂಬೆ,ಬಿ,ಕೆ,ಶ್ರೀಧರ್, ಭಾಗೀರಥಿ, ಶ್ರೀದೇವಿ ಕೊಂಬೊಟ್ಟು,ಕಾಲೇಜು ಪ್ರಾಂಶುಪಾಲೆ ಸುಮಿತ್ರಾ ,ಪ್ರೌಢಶಾಲಾ ಮುಖ್ಯೋಪಾಧ್ಯಾಯ ನೆಲ್ಸನ್ ,ಎಸ್ಬಿಸಿ ಕಾರ್ಯಾಧ್ಯಕ್ಷ ಮಂಜುನಾಥ್,ಕಾಲೇಜು ವಿದ್ಯಾರ್ಥಿ ನಾಯಕ ಪ್ರತೀಕ್ ಕೆವಿ ಹಾಗೂ ಸಿಂಚನ ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮಕ್ಕೆ ಮುನ್ನ ಕಾಲೇಜು ಪ್ರಾಂಶುಪಾಲೆ ಸುಮಿತ್ರಾ ಧ್ವಜಾರೋಹಣಗೈದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ನೆಲ್ಸನ್ ಸ್ವಾಗತಿಸಿ ಕಾಲೇಜು ಪ್ರಾಂಶುಪಾಲೆ ಸುಮಿತ್ರಾ ಪ್ರಸ್ತಾವನೆಗೈದರು.ಉಪನ್ಯಾಸಕಿ ಕವಿತಾ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.