ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೂಪಾಂತರ ಅಲೆ ಏರಿಕೆಯಾಗುತ್ತಲೇ ಇದೆ. ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಕೊರೋನಾ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳ ಸೇವೆಗಳ ಪ್ಯಾಕೇಜ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ಮಾನವ ಸಂಪನ್ಮೂಲ ಹಾಗೂ ಪರಿಕರಗಳ ವೆಚ್ಚ ಹೆಚ್ಚುತ್ತಿರುವುದರಿಂದ ಪ್ಯಾಕೇಜ್ ದರಗಳ ಪರಿಷ್ಕರಣೆ ನಡೆಸುವಂತೆ ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಮನವಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಪರಿಶೀಲನೆ ನಡೆಸಿದ್ದು, ಬಳಿಕ ಪರಿಷ್ಕೃತ ದರಗಳ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
ಜನರಲ್ ವಾರ್ಡ್ : 5200 ರೂ, ಹೆಚ್ಡಿಯು: 8000ರೂ., ಐಸೋಲೇಶನ್ ಐಸಿಯು ವೆಂಟಿಲೇಟರ್ ರಹಿತ: 9700 ರೂ. ಮತ್ತು ಐಸೋಲೇಶನ್ ಐಸಿಯು ವೆಂಟಿಲೇಟರ್ ಸಹಿತ: 11500 ರೂ. ಎಂದು ಸರ್ಕಾರ ತನ್ನ ಪರಿಷ್ಕೃತ ಆದೇಶದಲ್ಲಿ ತಿಳಿಸಿದೆ. ಈ ನಿಯಮ ಪಾಲನೆಯಾಗದಿದ್ದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಸರ್ಕಾರ ನೀಡಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಇದು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿ ಮಾಡಿದೆ. ಈ ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರ ಜನತಾ ಕರ್ಫ್ಯೂ ಜಾರಿಗೊಳಿಸಿದ್ದರೂ ಸೋಂಕು ಹರಡುವ ತೀವ್ರತೆ ಮಾತ್ರ ಕಡಿಮೆಯಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.