ಬೆಂಗಳೂರು: ಜನತಾ ಕರ್ಫ್ಯೂ ಹೇರಿದರೂ ಕೊರೋನಾ ಮಾತ್ರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೇ 10 ರಿಂದ 24 ರ ವರೆಗೂ ರಾಜ್ಯವನ್ನು ಸಂಪೂರ್ಣ ಲಾಕ್ಡೌನ್ ಪ್ರಕ್ರಿಯೆಗೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೊರೋನಾ ನಿಯಂತ್ರಣ ಸಂಬಂಧ ಇಂದು ತಜ್ಞರು, ಅಧಿಕಾರಿಗಳ, ಸಚಿವರ ಜೊತೆಗೆ ಬಿ.ಎಸ್ ಯಡಿಯೂರಪ್ಪ, ಮೇ 10 ರಿಂದ ರಾಜ್ಯದಲ್ಲಿ ಮುಂದಿನ 14 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲು ಸೂಚಿಸಿದ್ದಾರೆ. ಲಾಕ್ಡೌನ್ ಮಾಡುವಂತೆ ತಜ್ಞರು ವರದಿ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಸರ್ಕಾರ 15 ದಿನಗಳ ಕಾಲ ಕಂಪ್ಲೀಟ್ ಲಾಕ್ಡನ್ ಪ್ರಕ್ರಿಯೆಗೆ ಒಳಪಡಿಸಿದೆ.
ಸೋಮವಾರ ಬೆಳಿಗ್ಗೆ 6 ಗಂಟೆಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಇರಲಿದ್ದು, ಮನೆಯಿಂದ ಹೊರ ಬರಲು ಸಹ ಪಾಸ್ ಕಡ್ಡಾಯ ಎಂದು ತಿಳಿಸಿದ್ದಾರೆ. ಈ ಅವಧಿಯಲ್ಲಿ ಜನತಾ ಕರ್ಫ್ಯೂ ಸಂದರ್ಭದಲ್ಲಿ ಜನರಿಗೆ ನೀಡಲಾಗಿದ್ದ ಎಲ್ಲಾ ವಿನಾಯಿತಿಗಳನ್ನು ರದ್ದುಗೊಳಿಸುವ ಅಥವಾ ಮತ್ತಷ್ಟು ಕಠಿಣಗೊಳಿಸಿದೆ. ಈಗಿರುವ ಸಾರಿಗೆ ಸೇವೆಗಳಿಗೂ ನಿರ್ಬಂಧ ಹೇರಿದ್ದು ಆ ಮೂಲಕ ಜನ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಆಸ್ಪತ್ರೆ, ಮೆಡಿಕಲ್ ಹೊರತಾದಂತೆ ಮತ್ಯಾವ ಸೇವೆಗಳೂ ಲಭ್ಯವಿರುವುದಿಲ್ಲ ಎಂದು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
ಜನರು ಅನಗತ್ಯ ಓಡಾಡುವುದು ಕಂಡುಬಂದರೆ ದಂಡ, ಅಂತರ್ಜಿಲ್ಲಾ ಓಡಾಟಕ್ಕೂ ಅವಕಾಶ ಇಲ್ಲ ಎಂದು ಸೂಚಿಸಲಿದೆ. ಅಂತರಾಜ್ಯ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಇಂದು ಸರ್ಕಾರ ಹೊಸ ಗೈಡ್ಲೈನ್ಸ್ ಸಹ ಬಿಡುಗಡೆ ಮಾಡಲಿದೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.