News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಡ್-‌19: ಹೆಚ್ಚಿನ ಉದ್ಯೋಗಿಗಳಿಗೆ ‘ವರ್ಕ್‌ ಫ್ರಂ ಹೋಮ್‌ʼ ಆಯ್ಕೆ ನೀಡಿದ ಕೇಂದ್ರ

ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗುರುವಾರ ನೌಕರರ ಹಾಜರಾತಿ ನಿಯಮಗಳನ್ನು ಮತ್ತಷ್ಟು ಸಡಿಲಿಸಿದೆ. ಪರಿಷ್ಕೃತ ಸುತ್ತೋಲೆಯಲ್ಲಿ ಹೆಚ್ಚಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ವಿನಾಯಿತಿ ನೀಡಲಾಗಿದೆ.

ಗರ್ಭಿಣಿಯರು, ವಿಭಿನ್ನ ಸಾಮರ್ಥ್ಯದ ವ್ಯಕ್ತಿಗಳು ಮತ್ತು ಕಂಟೋನ್ಮೆಂಟ್ ವಲಯಗಳಲ್ಲಿ ವಾಸಿಸುವಂತಹ ಜನರಿಗೆ ಕಛೇರಿಗೆ ಆಗಮಿಸುವುದರಿಂದ ಸರ್ಕಾರವು 100% ವಿನಾಯಿತಿ ನೀಡಿದೆ. ಆದರೆ ಅವರು ಮನೆಯಿಂದಲೇ ಕೆಲಸ (ವರ್ಕ್ ಫ್ರಮ್ ಹೋಮ್) ಮಾಡುವುದನ್ನು ಮುಂದುವರಿಸಲಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಪರಿಷ್ಕೃತ ಆದೇಶವು ಮೇ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ.

ಈ ಕೇಂದ್ರ ಸರ್ಕಾರಿ ನೌಕರರಿಗೆ ಈಗ 2021 ರ ಮೇ 31 ರವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶವಿರುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top