ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಈ ಸವಾಲು ಎದುರಿಸಲು ಪ್ರಯತ್ನ ನಡೆಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ರಾಜ್ಯದ ಅರಣ್ಯ ಅಭಿವೃದ್ಧಿ ನಿಗಮವು 25 ಲಕ್ಷ ರೂ. ದೇಣಿಗೆ ನೀಡಿದೆ.
ನಿಗಮವು ಸಿಎಂ ಕೋವಿಡ್-19 ಪರಿಹಾರ ನಿಧಿಗೆ ಈ ನೆರವನ್ನು ಹಸ್ತಾಂತರಿಸಿದೆ. ನಿಗಮದ ಅಧ್ಯಕ್ಷೆ ತಾರಾ ಅನುರಾಧ ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಕೊರೋನಾ ಸೋಂಕು ಇಳಿಮುಖವಾಗುತ್ತಿಲ್ಲ. ಕೊರೋನಾ ಸೋಂಕು ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.